ವಿನೋದ ಪಾಟೀಲರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

ಶಹಾಪುರ : ತಾಲೂಕಿನ ದೋರನಹಳ್ಳಿ ಮಾಜಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರು ಹಾಗೂ ಮಾಜಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ  ಅಧ್ಯಕ್ಷರಾದ ವಿನೋದ್ ಗೌಡ ಮಾಲಿ ಪಾಟೀಲ್ ದೋರನಹಳ್ಳಿ ರವರಿಗೆ ರಾಜ್ಯ ಸರಕಾರ  ಪ್ರಮುಖ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕುರುಬ ಸಮಾಜದ ಯುವ ಮುಖಂಡರಾದ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ ಶಿವಕುಮಾರ   ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ರವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವಿನೋದಗೌಡ ಪಾಟೀಲ್ ಸಮಾಜ ಸೇವೆ ಮಾಡುತ್ತಾ,  ಬಡವರ ಪರವಾಗಿ ಹಗಲಿರುಳು ಎನ್ನದೆ ದುಡಿದಿದ್ದಾರೆ. ಕಲಬುರಗಿ,ಯಾದಗಿರಿ ಜಿಲ್ಲೆಯಲ್ಲಿ ಯುವಕರ ಪಡೆಯನ್ನು ಕಟ್ಟಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಸ್ಥಾನ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರು ಯಾವುದೇ ಅಧಿಕಾರದ ಆಸೆಗೆ ಬೀಳದೆ ಪಕ್ಷಕ್ಕಾಗಿ ದುಡಿದಿದ್ದಾರೆ. ಇಂಥವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡುವುದರಿಂದ ಪಕ್ಷಕ್ಕೆ ಲಾಭವಾಗುತ್ತದೆ. ಮುಂದಿನ ದಿನಗಳಲ್ಲಿ ನಡೆಯುವ ಕಲಬುರಗಿ, ರಾಯಚೂರು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗುತ್ತದೆ. ಆದ್ದರಿಂದ ಪ್ರಮುಖ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ತಿಳಿಸಿದರು.