ಬಿಎಮ್ ಪಾಟೀಲರಿಗೆ ಬಳ್ಳಾರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಿ:ಬಸವರಾಜ ಕರೇಗಾರ ಆಗ್ರಹ

ಬಳ್ಳಾರಿ: ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ವಕ್ತಾರರಾದ ಬಿಎಂ ಪಾಟೀಲರಿಗೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಬಸವರಾಜ ಕರೇಗಾರ ಒತ್ತಾಯಿಸಿದರು. ಯಾದಗಿರಿ ಜಿಲ್ಲೆಯಲ್ಲಿ ಈ ಸಂದರ್ಭದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ವರ್ಷಗಳಿಂದ ಸಾಮಾನ್ಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿರುವ ಬಿಎಮ್ ಪಾಟೀಲರು ಕಾಂಗ್ರೆಸ್ ಕೊಟ್ಟ ಜವಾಬ್ದಾರಿಗಳನ್ನು ನಿಭಾಯಿಸುತ್ತಾ ಬಂದಿದ್ದಾರೆ.

  ಬಳ್ಳಾರಿ ಮತ್ತು ಹೊಸಪೇಟೆ ಜಿಲ್ಲೆಯಾದ್ಯಂತ ಹಲವಾರು ಜನ ಕಾರ್ಯಕರ್ತರು ಬಿಎಮ್ ಪಾಟೀಲರಿಗಿದ್ದು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆಯಲು ಅರ್ಹರಾಗಿದ್ದಾರೆ.ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರ ಜೊತೆ ಒಳ್ಳೆಯ ಹೊಂದಾಣಿಕೆ ಹೊಂದಿರುವ ಬಿಎಂ ಪಾಟೀಲರು ಸಮರ್ಥ ನಾಯಕರಾಗಿದ್ದಾರೆ.ಎಲ್ಲಾ ಸಮಾಜದ ವರ್ಗದವರನ್ನು ಕೂಡಿಸಿಕೊಂಡು ಜಿಲ್ಲೆಯಾದ್ಯಂತ ಸಂಘಟನಾ ಚತುರನಾಗಿರುವ  ಪಾಟೀಲರು, ಹಲವಾರು ಕಾಂಗ್ರೆಸ್ ಪರ ಹೋರಾಟ ಮಾಡಿದ್ದು, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆಯನ್ನು ಕೊಟ್ಟರೆ ಸಮರ್ಥವಾಗಿ ನಡೆಸಿಕೊಂಡು ಹೋಗುತ್ತಾರೆ. ಆದ್ದರಿಂದ ಶಾಸಕಾಂಗ ಪಕ್ಷದ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಮತ್ತು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು  ಪಾಟೀಲರ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿರುವುದರಿಂದ ಜಿಲ್ಲಾಧ್ಯಕ್ಷ ಸ್ಥಾನ ಕೊಟ್ಟರೆ ಸಮರ್ಥವಾಗಿ ನಡೆಸಿಕೊಂಡು ಹೋಗುತ್ತಾರೆ ಎನ್ನುವ ಹೆಬ್ಬಯಕೆ ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *