ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳಿಂದ  ಪ್ರತಿಭಟನೆ

yadagiri ಶಹಾಪುರ : ರಾಜ್ಯ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ತಮಿಳುನಾಡಿಗೆ ನೀರು ಬಿಡದಂತೆ ಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ ಕಾವೇರಿ ಜಲಾಶಯ  ಬತ್ತಿದೆ. ಬೆಂಗಳೂರು ನಗರಕ್ಕು ಕುಡಿಯಲು ನೀರಿಲ್ಲ. ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕಾವೇರಿ ನಿಯಂತ್ರಣ ಪ್ರಾಧಿಕಾರ ಸಮಿತಿಯು ತಮಿಳುನಾಡಿಗೆ 5000 ಕ್ಯೂಸೆಕ್ಸ್ ಪ್ರತಿದಿನ ನೀರು ಹರಿದು ಬಿಡಬೇಕೆಂದು ಆದೇಶಿಸಿದ್ದು ಯಾವ ಪುರುಷಾರ್ಥಕ್ಕೆ. ಕಾವೇರಿ ಪ್ರಾಧಿಕಾರ ತಮಿಳುನಾಡಿನ ಹಿತ ಕಾಯಲು ರಚನೆಯಾಗಿದೆಯೇ .?

ಕೆಆರ್‌ಎಸ್‌ ಜಲಾಶಯ ವಸ್ತು ಸ್ಥಿತಿಯನ್ನು ಅರಿತುಕೊಳ್ಳಬೇಕು. ನೀರಿನ ಪ್ರಮಾಣ ಇಳಿಕೆಯಾಗಿದೆ. ಮುಂಗಾರು ಮಳೆ ಸರಿಯಾದ ಪ್ರಮಾಣದಲ್ಲಿ ಬಿದ್ದಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಸುಪ್ರೀಂಕೋರ್ಟಿಗೆ ಕಾವೇರಿ ನೀರಿನ ಬಗ್ಗೆ ಅರಿವು ಮಾಡಿಕೊಡಬೇಕೆಂದು ತಿಳಿಸಿದರು. ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಮಲ್ಲಯ್ಯ ಸ್ವಾಮಿ ಇಟಗಿ ಸೋಪಣ್ಣ ಸಾಗರ್ ಮೌನೇಶ್ ಹಳಿಸಗರ್ ಸೇರಿದಂತೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವೆಂಕಟೇಶ್ ಬೋನಿ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಟ್ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರು ಮೌನೇಶ್ ಹಳಿ ಸಗರ್ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತರಕ್ಷಣ ಸಂಸ್ಥಾಪಕ ಅಧ್ಯಕ್ಷರು ಶೋಪಣ್ಣ ಸಗರ್ ಜಯ ಕರ್ನಾಟಕ ತಾಲ್ಲೂಕು ಅಧ್ಯಕ್ಷರು ಸುಭಾಷ್ ಪೇಟೆ ಅಂಗವಿಕಲ ರಕ್ಷಣಾ ವೇದಿಕೆ ಅಧ್ಯಕ್ಷರು ಮಲ್ಲನಗೌಡ ರಾಯಚೂರು ಕಾರ್ಮಿಕ ಸಂಘಟನಾ ಅಧ್ಯಕ್ಷರು ಭೀಮನಗೌಡ ಕಟ್ಟಿಮನಿ ಸೇರಿದಂತೆ ಕನ್ನಡಪರ ಸಂಘಟನೆಗಳ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

About The Author