ಮಕ್ಕಳ ಅಪ್ಠೌಕತೆ ಸಂಪೂರ್ಣ ನಿರ್ಮೂಲನೆ ಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು : ಸಚಿವ ದರ್ಶನಾಪುರ

yadagiri ಶಹಾಪುರ : ಮಕ್ಕಳ ಅಪ್ಠೌಕತೆ ಸಂಪೂರ್ಣ ನಿರ್ಮೂಲನೆ ಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು.ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರಅಗತ್ಯ. ಇವರಲ್ಲಿನಅಪ್ಠೌಕತೆ ನಿವಾರಣೆಗಾಗಿ ಸರಕಾರ ಜಾರಿಗೊಳಿಸಿರುವ ಯೋಜನೆಗಳ ಸದ್ಬಳಕೆ ಮಾಡಿಕೊಂಡು  ಮಕ್ಕಳ ಅಪ್ಠೌಕತೆ ಸಂಪೂರ್ಣ ನಿರ್ಮೂಲನೆ ಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಬೇರೆ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುವ ಮನೋ ಪ್ರವೃತಿ ಬೆಳಸಿಕೊಳ್ಳಬೇಕು.ಇಲಾಖೆಗಳೊಂದಿಗೆ ಸಂಘಟನಾತ್ಮಕವಾಗಿಕಾರ್ಯನಿರ್ವಸಬೇಕು ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

ನಗರದ ಚರಬಸವೇಶ್ವರ ಕಲ್ಯಾಣ ಮಂಟಪದಲ್ಲಿ, ತಾಲೂಕ ಆಡಳಿತ, ತಾಲೂಕ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿಯೋಜನೆ ಶಹಾಪುರ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಭವಿಷ್ಯದ ಯುವ ಜನರನ್ನು ರಕ್ಷಿಸಬೇಕು.ಗ್ರಾಮೀಣ ಪ್ರದೇಶದಲ್ಲಿನ ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ತಿಳುವಳಿಕೆ ಇರುವುದಿಲ್ಲ ಎಂದು  ಹೇಳಿದರು.

ಉತ್ತರ ಕರ್ನಾಟಕ ಕರವೇ ಅಧ್ಯಕ್ಷ ಶರಣು ಗದ್ದುಗೆ ಅವರು, ಮಹಿಳೆಯರ ಮನಸ್ಸು ಕರುಣಾಮಯಿ, ಅಂಗನವಾಡಿ ಕಾರ್ಯಕರ್ತೆಯರು ಸಮಾಜದಲ್ಲಿನ ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಪ್ರೀತಿಸಿ ಪೋಷಿಸುವ ಗುಣವುಳ್ಳವರು.ಇವರ ಸೇವೆ ಸಮಾಜಕ್ಕೆ ಅತ್ಯಮೂಲ್ಯವಾಗಿದೆ ಎಂದು ಹೇಳಿದರು.ಭೂಷಣ ಅಭಿಯಾನ  ಕಾರ್ಯಕ್ರಮವನ್ನು ಯಶಸ್ವಿಯಾಗಲು ಕಾರಣರಾದ   ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಮೇಲ್ವಿಚಾರಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಇದೇ ವೇಳೆಯಲ್ಲಿ ಗರ್ಭಿಣ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.

ತಾಲೂಕ ಆರೋಗ್ಯಅಧಿಕಾರಡಾ.ರಮೇಶ್ಗುತ್ತೇದಾರ ಶಿಶು ಅಭಿವೃದ್ಧಿಯೋಜನಾಧಿಕಾರಿ ಮೀನಾಕ್ಷಿ ಪಾಟೀಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ, ಡಾ.ಶ್ರೀದೇವಿ, ಸಹಾಯಕ ಶಿಶು ಅಭಿವೃದ್ಧಿಯೋಜನಾಧಿಕಾರಿ ಸಿದ್ದನಗೌಡ ಬಿರಾದಾರ್, ಯೋಗಿತಾಬಾಯಿ, ಆರೋಗ್ಯಅಧಿಕಾರಿ ಸಂಗಣ್ಣ ನುಚ್ಚಿನ್, ಮೇಲ್ವಿಚಾರಕಿಯರು, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಸ್ತ್ರೀಶಕ್ತಿ ಸಂಘದವರು ಹಾಗೂ ಗರ್ಭಿಣಿ ಸ್ತ್ರೀಯರು ಭಾಗವಹಿಸಿದ್ದರು

About The Author