ನಾಳೆ ಹಿಂದೂ ಗಣಪತಿ ವಿಸರ್ಜನಾ ಕಾರ್ಯಕ್ರಮ ಬಸವರಾಜ ಪಾಟೀಲ್ ಯತ್ನಾಳ ಭಾಗಿ

ಶಹಾಪುರ : ತಾಲೂಕಿನ ಸುಬೇದಾರ್ ಆಸ್ಪತ್ರೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ  ಅದ್ದೂರಿಯಾಗಿ ಜರುಗಲಿದೆ ಎಂದು ಬಿಜೆಪಿಯ ಯುವ ಮುಖಂಡರಾದ ಕರಣ್ ಸುಬೇದಾರ ತಿಳಿಸಿದರು.ಕಾರ್ಯಕ್ರಮಕ್ಕೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಆಂದೋಲನದ ಶ್ರೀಗಳಾದ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಚಿತ್ತಾಪುರ ಕ್ಷೇತ್ರದ ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್ ಸೇರಿದಂತೆ ಯಾದಗಿರಿ ಜಿಲ್ಲಾ ಮುಖಂಡರ,ಶಹಪುರದ ಬಿಜೆಪಿ ಹಿರಿಯ ಮುಖಂಡರಾದ ಡಾ.ಚಂದ್ರಶೇಖರ ಸುಬೇದಾರ ಹಿರಿಯ ಮುಖಂಡರು ಹಾಗೂ ಸುತ್ತಲಿನ ಗ್ರಾಮಗಳ ಹಿಂದೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವರು.ಸುಮಾರು 25 ಸಾವಿರದಿಂದ 30 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.ಮಧ್ಯಾಹ್ನ 12 ಗಂಟೆಗೆ ಮಹಾಪ್ರಸಾದವಿದ್ದು, ಎರಡು ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.ಸುಭೇದಾರ ಆಸ್ಪತ್ರೆಯಿಂದ ಆರಂಭವಾದ ಶೋಭಾಯಾತ್ರೆ ನಗರದ ಬಸವೇಶ್ವರ ವೃತ್ತದಿಂದಿಡಿದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.