ಬಾಣಂತಿಯರು ಹಾಗೂ ಅಪೌಷ್ಟಿಕತೆಯುಳ್ಳ ಮಕ್ಕಳ ಬಗ್ಗೆ ಕಾಳಜಿ ವಹಿಸಿ : ಮಲ್ಲಿಕಾರ್ಜುನ ಸಂಗ್ವಾರ

YADAGIRI ವಡಗೇರಾ : ಗರ್ಭಿಣಿ ತಾಯಂದಿರು ಹಾಗೂ ಅಪೌಷ್ಟಿಕತೆವುಳ್ಳ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕೆಂದು ಅಂಗನವಾಡಿ ಕಾರ್ಯಕರ್ತೆಯರಿಗೆ ವಡಗೇರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಹೇಳಿದರು. ಮಹಿಳಾ ಮಕ್ಕಳು ಶಿಶು ಅಭಿವೃದ್ಧಿ ಇಲಾಖೆ ಹಾಗೂ ನೀತಿ ಆಯೋಗದ ಆಸ್ಪಿರೇಷನ್ ಬ್ಲಾಕ್ ರವರ ಸಹಯೋಗದಲ್ಲಿ ಪಟ್ಟಣದ ಬನದ ರಾಚೋಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿ ತಾಯಂದಿರಿಗೆ ಹಾಗೂ ಮಕ್ಕಳಿಗೆ ಒಳ್ಳೆಯ ಪೋಷಕಾಂಶವುಳ್ಳ ಆಹಾರವನ್ನು ಸಮರ್ಪಕವಾಗಿ ವಿತರಿಸಿ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಹೇಳಿದರು.ಶಿಶು ಅಭಿವೃದ್ಧಿ ತಾಲೂಕು ಯೋಜನಾಧಿಕಾರಿ ಮೀನಾಕ್ಷಿ ಪಾಟೀಲ್ ಮಾತನಾಡುತ್ತಾ,ನಮ್ಮ ಇಲಾಖೆ ವತಿಯಿಂದ ಬರುವ ಎಲ್ಲಾ ರೀತಿಯ ಸಕಲ ಸೌಲಭ್ಯಗಳನ್ನು ಮಹಿಳೆಯರಿಗೆ ಮಕ್ಕಳಿಗೆ ಬಾಣಂತಿಯರಿಗೆ ನೀಡುತ್ತಾ ಬಂದಿದ್ದೇವೆ. ಅಪೌಷ್ಟಿಕತೆ ನಿವಾರಣೆಗೆ ಹಲವಾರು ರೀತಿಯ ಕ್ರಮಗಳನ್ನು ಕೈಗೊಂಡು ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಸರ್ಕಾರದಿಂದ ಸಹಾಯ ಪಡೆದು ಶಿಶು ಅಭಿವೃದ್ಧಿ ಇಲಾಖೆಯ ಯೋಜನೆಗಳನ್ನು ಪ್ರತಿಯೊಬ್ಬ ಫಲಾನುಭವಿಗೆ ಮುಟ್ಟಿಸುವಂತಹ ಕೆಲಸ ಮಾಡುತ್ತೇವೆ.ಪ್ರತಿಯೊಬ್ಬ ತಾಯಂದಿರು ಮನೆಗಳಲ್ಲಿ ಸಿರಿ ಧಾನ್ಯಗಳ ಆಹಾರವನ್ನು ಇಡಬೇಕು.ಅಂದಾಗ ಮಾತ್ರ ಮಕ್ಕಳು ಆರೋಗ್ಯವಂತರಾಗಿರುತ್ತಾರೆ. ಜಂಕ್ ಫುಡ್ ಗಳನ್ನು ನೀಡಬಾರದು ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಗನ್ನಾಥ ರೆಡ್ಡಿ, ಆಸ್ಪಿರೇಷನ್ ಜಿಲ್ಲಾ ವ್ಯವಸ್ಥಾಪಕ ವಿಶಾಲ್ ,ತಾಲೂಕು ವ್ಯವಸ್ಥಾಪಕರಾದ ಕಾವೇರಿ,ಅಂಗನವಾಡಿ ಮೇಲ್ವಿಚಾರಕರಾದ ನಾಗಮ್ಮ, ಮಲ್ಕಮ್ಮ, ಕೃಷಿ ಇಲಾಖೆಯ ಸುನಿಲಕುಮಾರ,ಕೋಮಲ್ ರಾಟಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇನ್ನಿತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಶಶಿಕಾಂತ್ ಮನಗನಾಳ ನಿರೂಪಿಸಿ ವಂದಿಸಿದರು.

About The Author