ನಮ್ಮ ಕರ್ನಾಟಕ ಸೇನೆಯ ಸಭೆ ಹಲವು ವಿಷಯಗಳ ಚರ್ಚೆ

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದ ಕೇಂದ್ರ ಕಚೇರಿಯಲ್ಲಿ ನಮ್ಮ ಕರ್ನಾಟಕ ಸೇನೆಯ ಪ್ರಮುಖ ಸಭೆ ಕರೆಯಲಾಯಿತು.ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ಬಸವರಾಜ ಪಡುಕೋಟೆ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾವೇರಿ ಹೋರಾಟ ದ ಬಗ್ಗೆ ದಿನಗಳಲ್ಲಿ ಯಾವ ರೀತಿಯಾಗಿ ಹೋರಾಟ ನಡೆಸುವುದರ ಎಂಬುದರ ಬಗ್ಗೆ ಚರ್ಚಿಸಲಾಯಿತು.

ನಮ್ಮ ಕರ್ನಾಟಕ ಸೇನೆಯನ್ನು ಬೆಂಗಳೂರು ನಗರದಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಜಿಲ್ಲೆ ತಾಲೂಕುಗಳಲ್ಲಿ ನಮ್ಮ ಕರ್ನಾಟಕ ಸೇನೆಯನ್ನು ಪಸರಿಸುವಂತೆ, ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಯಿತು.ರಾಜ್ಯದ ಪದಾಧಿಕಾರಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ನಾಗರಾಜ,ಶ್ರೀ ರಾಮ, ಲಕ್ಷ್ಮಣ, ಮಾಲತಿ ಶಿವನಾಗ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಮಲೇಶ, ಮಹಿಳಾ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ, ಗೀತಾ, ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷರು ದೇಸಾಯಿಗೌಡ ಪಾಟೀಲ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *