ಶಹಪುರ : ನಾಳೆ ಪಶು ಆಸ್ಪತ್ರೆ ಆವರಣದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಪುರ ವಲಸೆ ಕುರಿಗಾರರಿಗೆ ಸಂಚಾರಿ ಕಿಟ್ ವಿತರಣೆ ಮಾಡಲಿದ್ದಾರೆ ಎಂದು ಕರ್ನಾಟಕ ಸಹಕಾರಿ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಹಕಾರ ಸಂಘಗಳ ಮಹಾಮಂಡಳಿ ರಾಜ್ಯ ನಿರ್ದೇಶಕರಾದ ಶಾಂತನಗೌಡ ನಾಗನಟಗಿ ಪ್ರಕಟಣೆಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರಾದ ಡಾ. ರಾಜಶೇಖರ ಕಾಸ್ಬಾಗ್,ತಾಲೂಕು ಶಹಪುರ ತಾಲೂಕು ಪಶು ಆಸ್ಪತ್ರೆಯ ಸಹ ನಿರ್ದೇಶಕರಾದ ಡಾ.ಷಣ್ಮುಖಪ್ಪ ಕೊಂಗಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಂಚಾರಿ ಕುರಿಗಾರರು,ಕುರಿಗಾರರು ಹಾಗೂ ಎಲ್ಲಾ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಕಾರ್ಯದರ್ಶಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಿದ್ದಾರೆ.