ಬಡ ಕುರಿಗಾಯಿಗೆ ಸೂಕ್ತ ಪರಿಹಾರ ನೀಡುವಂತೆ ವಿನೋದ್ ಪಾಟೀಲ್ ಒತ್ತಾಯ

ಯಾದಗಿರಿ : ಮೂಕ ಪ್ರಾಣಿಗಳ ಮೇಲೆ ಹಲ್ಲೆ ಮಾಡಿ ಸಾಯಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕುರಿಗಾಯಿಗೆ ಜಿಲ್ಲಾಡಳಿತ  ಸೂಕ್ತ ಪರಿಹಾರ ಒದಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ವಿನೋದ ಪಾಟೀಲ್ ದೋರನಹಳ್ಳಿ ಹೇಳಿದರು.ಮಂಡಗಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು,  ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರ ಕೊಡಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ವಿನೋದ್ ಪಾಟೀಲ್

 ಕಳೆದ ಎರಡು ದಿನಗಳ ಹಿಂದೆ ಶಹಾಪುರ ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿ ಕೀಡಿಗೇಡಿಗಳು ಮಲ್ಲಪ್ಪ ಎಂಬವರ ಕುರಿಗಳ ಮೇಲೆ ಚಾಕುವಿನಿಂದ  ಹೊಟ್ಟೆ ಸೀಳಿ ಹಲ್ಲೆ ಮಾಡಿ ಸುಮಾರು 10ಕ್ಕೂ ಹೆಚ್ಚು ಕುರಿಗಳನ್ನು ಸಾಯಿಸಿದ್ದರು. ಕೆಲವು ಕುರಿಗಳ ಸ್ಥಿತಿ ಚಿಂತಾ ಜನಕವಾಗಿದೆ.  ಕೂಡಲೇ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಕೂಡ ಕುರಿಗಾಯಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ಮಾಡಿದ್ದು,  ಸಂಬಂಧಪಟ್ಟ ಅಧಿಕಾರಿಗಳು ಆ ಬಡ ಕುರಿಗಾಯಿಗೆ ಸೂಕ್ತ ಪರಿಹಾರ ನೀಡಬೇಕು ಎಂದು  ಒತ್ತಾಯಿಸಿದರು.

Leave a Reply

Your email address will not be published. Required fields are marked *