ಪ್ರದೀಪ್ ಈಶ್ವರ ಅವರನ್ನು ಶಾಸಕಸ್ಥಾನದಿಂದ ಅನರ್ಹಗೊಳಿಸಲು ಸ್ಪೀಕರ್ ಗೆ ಮುಕ್ಕಣ್ಣ ಕರಿಗಾರ ಪತ್ರ

 

Raichur ಗಬ್ಬೂರು ಅಕ್ಟೋಬರ್ 10 : ಖಾಸಗಿ ವಾಹಿನಿಯು ಆಯೋಜಿಸಿರುವ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ ಅವರು ಶಾಸಕರಿಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸಿ,ಸಾಂವಿಧಾನಿಕ ಕರ್ತವ್ಯಲೋಪ ಎಸಗಿದ್ದು ಅವರನ್ನು ಶಾಸಕತ್ವದಿಂದ ಅನರ್ಹಗೊಳಿಸಬೇಕೆಂದು ಕರ್ನಾಟಕ ರಾಜ್ಯ ಪ್ರಜಾಪ್ರತಿನಿಧಿಗಳ ಸಂಸ್ಥೆಯ ಅಧ್ಯಕ್ಷ ಮುಕ್ಕಣ್ಣ ಕರಿಗಾರ ಅವರು ಸ್ಪೀಕರ್ ಅವರನ್ನು ಒತ್ತಾಯಿಸಿದ್ದಾರೆ.ಈ ಕುರಿತು ಅಕ್ಟೋಬರ್ 10,2023 ರಂದು ‘ಪ್ರಜಾವಾಣಿ’ ದಿನಪತ್ರಿಕೆಯ ವರದಿಯನ್ನು ಲಗತ್ತಿಸಿ ಸ್ಪೀಕರ್ ಅವರಿಗೆ ಬರೆದ ಪತ್ರದಲ್ಲಿ ಕರ್ನಾಟಕ ರಾಜ್ಯದ ಬಹುತೇಕ ತಾಲೂಕುಗಳು ಬರದ ಬವಣೆಗೆ ತುತ್ತಾದ ಈ ದುರ್ಭರ ಸಂದರ್ಭದಲ್ಲಿ ಕ್ಷೇತ್ರದ ಜನತೆಯೊಂದಿಗೆ ಇದ್ದು ಅವರ ನೋವು,ಸಂಕಟಗಳಿಗೆ ಸ್ಪಂದಿಸಬೇಕಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ ಅವರು ನೂರು ದಿನಗಳ ಕಾಲ ನಡೆಯುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರತಿನಿಧಿಯಾಗಿ ತಮ್ಮ ಕರ್ತವ್ಯನಿರ್ವಹಣೆಯಲ್ಲಿ ವಿಫಲರಾಗಿದ್ದಾರಲ್ಲದೆ ಸಂವಿಧಾನದ ಅನುಚ್ಛೇದ 188 ರಲ್ಲಿ ನಿಯಮಿಸಿದಂತೆ ಅನುಸೂಚಿ 3 ರ 8(ಬಿ) ಯಂತೆ ವಿಧಾನಸಭೆಯಲ್ಲಿ ಶಾಸಕರಾಗಿ ಪ್ರಮಾಣವಚನಸ್ವೀಕರಿಸಿದ ಸಂದರ್ಭದಲ್ಲಿ ‘…. ನಾನು ವಹಿಸಿಕೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆಂದೂ’ ಎನ್ನುವ ಪದಪುಂಜಗಳುಳ್ಳ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನದ ಆಶಯಗಳಿಗೆ ಧಕ್ಕೆ ತಂದಿದ್ದಾರೆ.ಆದ್ದರಿಂದ ಶಾಸಕರ ಸ್ಥಾನಕ್ಕೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸಿರುವ ಪ್ರದೀಪ ಈಶ್ವರ ಅವರನ್ನು ಚಿಕ್ಕಬಳ್ಳಾಪುರ ವಿಧಾನಸಭೆಯ ಸದಸ್ಯತ್ವದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ವಿಧಾನಸಭೆಯ ಸ್ಪೀಕರ್ ಅವರನ್ನು ಆಗ್ರಹಿಸಿದ್ದಾರೆ.

About The Author