ಇಂದು ಡಿಡಿಯು ಸಮೂಹ ಶಿಕ್ಷಣ ವಿದ್ಯಾಸಂಸ್ಥೆಯ ವತಿಯಿಂದ ಕ್ರೀಡಾಕೂಟ

ಶಹಾಪುರ : ತಾಲೂಕಿನ ತಾಲೂಕು ಕ್ರೀಡಾಂಗಣದಲ್ಲಿ ಇಂದು ( 15 /10/2023 ) ಬೆಳಿಗ್ಗೆ 10:30 ಗಂಟೆಗೆ   ಡಿ ಡಿ ಯು ಶಿಕ್ಷಣ ಸಮೂಹ ವಿದ್ಯಾಸಂಸ್ಥೆಯ ವತಿಯಿಂದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಲಾಗಿದ್ದು, ಕಾರ್ಯಕ್ರಮಕ್ಕೆ ಸಣ್ಣ ಕೈಗಾರಿಕೆ,ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಮತ್ತು ಮಾಜಿ ಸಚಿವರಾದ ಎಚ್ಎಮ್ ರೇವಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಡಿಡಿಯು ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಕಾಂಗ್ರೆಸ್ ಮುಖಂಡರಾದ ಡಾ. ಬೀಮಣ್ಣ ಮೇಟಿ ತಿಳಿಸಿದ್ದಾರೆ.ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯ ಕ್ರೀಡಾಪಟುಗಳು ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವರು.ಕ್ಷೇತ್ರದ ಹಿರಿಯ ನಾಗರಿಕರು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.