ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷರಾಗಿ ಸಾಯಬಣ್ಣ ಕೆಂಗೂರಿ ನೇಮಕ

ವಡಗೇರಾ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯದ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಅನುಮೋದನೆ ಮೇರೆಗೆ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ರಾಜ್ಯದ್ಯಕ್ಷರಾದ ಮಧು ಬಂಗಾರಪ್ಪನವರು ಯಾದಗಿರಿ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ವಿಭಾಗದ  ಸಮಿತಿಯ ಜಿಲ್ಲಾಧ್ಯಕ್ಷರನ್ನಾಗಿ ಸಾಯಬಣ್ಣ ಕೆಂಗೂರಿ ರವರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ  ನೇಮಕ ಮಾಡಿ ಆದೇಶ ಪತ್ರ ನೀಡಿದರು.

ನಿಮ್ಮ ಹಿರಿತನ ಹಾಗೂ ಪಕ್ಷ ನಿಷ್ಠೆಯನ್ನು ಗುರುತಿಸಿ ತಮಗೆ ಈ  ಉನ್ನತ ಜವಾಬ್ದಾರಿಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ರಾಜ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುವುದರ ಜೊತೆಗೆ ನಮ್ಮ ಸರ್ಕಾರದ ಸಾಧನೆಗಳ ಕುರಿತು ಜನರಲ್ಲಿ ತಿಳುವಳಿಕೆ ಮೂಡಿಸುವಂತೆ ಸಲಹೆ ನೀಡಿದರು.ನನ್ನ ಆಯ್ಕೆಗೆ ಸಹಕರಿಸಿದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ಜಿಲ್ಲಾಧ್ಯಕ್ಷರಿಗೆ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಸಾಯಬಣ್ಣ ಕೆಂಗೂರಿ ಅಭಿನಂದನೆ ಸಲ್ಲಿಸಿದರು.