ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ತಾಲೂಕಾಡಳಿತದಿಂದ ಪೂರ್ವಭಾವಿ ಸಭೆ

ಶಹಾಪುರ : ಜಗತ್ತಿಗೆ ಸನ್ಮಾರ್ಗ ತೋರಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅಕ್ಟೋಬರ್ 28 ರಂದು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಗುತ್ತಿದ್ದು,ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ತಹಸಿಲ್ದಾರ್ ಉಮಾಕಾಂತ ಹಳ್ಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ತಹಸೀಲ್ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೆಳಗ್ಗೆ 9.30ಕ್ಕೆ ನಗರದ ವಾಲ್ಮೀಕಿ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ತಳಗೆ ವಿಶೇಷ ಪೂಜೆ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದ ಬಸವೇಶ್ವರ ವೃತ್ತದ ಮೂಲಕ ನಗರಸಭೆಯವರಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.

ತಾಲೂಕ ಆಡಳಿತ ಹಾಗೂ ನಗರಸಭೆ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಜೀವನ ವೃತ್ತಾಂತ, ತತ್ವ ಆದರ್ಶಗಳ ಕುರಿತು ವಿಶೇಷ ಉಪನ್ಯಾಸ ನೀಡಲಾಗುತ್ತಿದೆ, ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ತೀರ್ಮಾನಿಸಲಾಯಿತು. ಅಲ್ಲದೆ ಸಮಾಜದ ಹಿರಿಯ ನಾಗರಿಕ ಹಾಗೂ ಸಮುದಾಯದ ವಿಶೇಷ ಸಾಧಕರನ್ನು ಸನ್ಮಾನಿಸಿ ಗೌರವಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಅವರು ಮಾಹಿತಿ ನೀಡಿದರು.

, ತಾಲೂಕ ಸಮಾಜ ಕಲ್ಯಾಣ ಅಧಿಕಾರಿ ರಾವುತಪ್ಪ ಹವಲ್ದಾರ್, ತಾಲೂಕ ಖಜನೆ ಅಧಿಕಾರಿ ಡಾಕ್ಟರ್ ಎಂಎಸ್ ಶಿರವಾಳ, ವಾಲ್ಮೀಕಿ ಸಮುದಾಯದ ಜಿಲ್ಲಾ ಮುಖಂಡ ಗೌಡಪ್ಪ ಗೌಡ ಆಲ್ದಾಳ,ಹನುಮಂತರಾಯ ದೊರೆ ದಳಪತಿ. ಮಹರ್ಷಿ ವಾಲ್ಮೀಕಿ ನಾಯಕರ ಸಂಘದ ತಾಲೂಕ ಅಧ್ಯಕ್ಷ ಮರೆಪ್ಪ ಪ್ಯಾಟಿ, ಗೌರವಾಧ್ಯಕ್ಷ ರವಿಕುಮಾರ್ ಯಾಕ್ಸ್ಚಿಂತಿ, ಕಾರ್ಯದರ್ಶಿ ಹಣಮಂತ ದೊರೆ ಟೋಕಾಪುರ, ಮಾನಪ್ಪನಾಯಕ ವನದುರ್ಗ, ಹನುಮಂತರಾಯ ಬೀರನೂರ, ನಿವೃತ್ತ ಪಿಎಸ್ಐ ತಮ್ಮಣ್ಣ ರಾಂಪುರ್, ರಂಗಣ್ಣ ದೋರಿ ಅನ್ವರ್, ಸತ್ಯನಾರಾಯಣದೊರೆ, ಧರ್ಮಣ್ಣ ಬಾಣತಿಯಳ, ಭೀಮಣ್ಣ ಕೊಂಗಂಡಿ ಸೇರಿದಂತೆ ಸಮುದಾಯದ ಅನೇಕ ಮುಖಂಡರು ಭಾಗವಹಿಸಿದ್ದರು.

 

About The Author