ಉರ್ದು ಪ್ರೌಢಶಾಲೆ ಮಂಜೂರಿಗಾಗಿ ಸಚಿವರಿಗೆ  ಮನವಿ

ವಡಗೇರಾ : ವಡಗೇರಾ ಪಟ್ಟಣದಲ್ಲಿ ಉರ್ದು ಪ್ರೌಢಶಾಲೆ ಮಂಜೂರಾತಿಗಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ  ಉಸ್ಮಾನ್ ಬಾಷಾ ತಡಿಬಿಡಿ ನೇತೃತ್ವದಲ್ಲಿ ಬೆಂಗಳೂರಿನ ಅವರ ನಿವಾಸದಲ್ಲಿ ಮನವಿ ಸಲ್ಲಿಸಲಾಯಿತು. ಪಟ್ಟಣದಲ್ಲಿ ಸುಮಾರು ವರ್ಷಗಳಿಂದ ಪ್ರೌಢಶಾಲೆಗೆ ಬೇಡಿಕೆ ಇದ್ದು, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ಈ ತಾಲೂಕಿಗೆ ಒಳಪಡುವ ಹಲವಾರು ಗ್ರಾಮದ ಮಕ್ಕಳು ಉರ್ದು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಭಾಗದ ಮಕ್ಕಳು  ಯಾದಗಿರಿ ಶಹಾಪುರ ಪಟ್ಟಣಕ್ಕೆ ತೆರಳಿ ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಇದೆ.ವಡಗೇರಾ ಪಟ್ಟಣದಲ್ಲಿ ಉರ್ದು ಪ್ರೌಢಶಾಲೆಯಾದರೆ ಅನುಕೂಲವಾಗುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಶಿಕ್ಷಣ ಸಚಿವರು ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಇದರ ಬಗ್ಗೆ ಸೂಕ್ತ ಮಾಹಿತಿ ತರಿಸಿಕೊಂಡು ಬೇಗನೆ ವಡಗೇರಾ ಪಟ್ಟಣದಲ್ಲಿ ಉರ್ದು ಪ್ರೌಢಶಾಲೆ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ವಕ್ಫ್ಬೋರ್ಡ್ ಜಿಲ್ಲಾಧ್ಯಕ್ಷ ಜಾಹಿರ್ ಸವೇರಾ, ಅಲಿಸಾಬ ನಾಯ್ಕಲ್ ಸೇರಿದಂತೆ ಇನ್ನಿತರರು ಇದ್ದರು.

About The Author