ನವೋದಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಹಾಪುರ : ತಾಲೂಕಿನ ಹೊತಪೇಟ ಗ್ರಾಮದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ವರ್ಷದ 9ಮತ್ತು 11ನೇಯ ತರಗತಿಗಾಗಿ ಲ್ಯಾಟರಲ್ ಎಂಟ್ರಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವಿದ್ಯಾಲಯದ ಅಧಿಕೃತ ವೆಬ್‍ಸೈಟ್‍ www.navodaya.gov.in ನಲ್ಲಿ ಅರ್ಜಿಗಳನ್ನು ಹಾಕಲು ಅ.31ಕೊನೆಯ ದಿನವಾಗಿದೆ.ಶೈಕ್ಷಣಿಕ ವರ್ಷ 2023-24ರಲ್ಲಿ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 8ಮತ್ತು 10ನೇಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಆಯ್ಕೆ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.2024ಫೆಬ್ರುವರಿ10ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ವಿದ್ಯಾಲಯದ ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author