ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ

yagiri ಶಹಪುರ : ಭಾಷಾವಾರು ಪ್ರಾಂತ್ಯದ ಅನುಸಾರ 1956 ನವಂಬರ್ ಒಂದರಂದು ನಮ್ಮ ರಾಜ್ಯ ಮೈಸೂರು ಪ್ರಾಂತ್ಯವಾಗಿ ಉದಯವಾಯಿತು. 1973 ರಲ್ಲಿ ಆಗಿನ ರಾಜ್ಯದ ಮುಖ್ಯಮಂತ್ರಿಗಳಾದ ದೇವರಾಜ ಅರಸುರವರು ಕರ್ನಾಟಕ ಎಂದು ಮರುನಾಮಕರಣ ಮಾಡಿದರು ಎಂದು ತಹಶೀಲ್ದಾರರಾದ ಉಮಾಕಾಂತ ಹಳ್ಳೆ ಹೇಳಿದರು. ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ತಾಲೂಕು ಆಡಳಿತ ಮತ್ತು ನಗರಸಭೆ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕರಾದ ಭೀಮಣ್ಣ ಶಾಖಪೂರ ಮಾತನಾಡಿ ಹಲವರ ತ್ಯಾಗ ಬಲಿದಾನದ ಪರಿಣಾಮ ಪ್ರಾಂತ್ಯ ವಾರು ಕನ್ನಡ ರಾಜ್ಯದ ಉದಯವಾಯಿತು. ನಮ್ಮ ಕನ್ನಡ ಮಾತನಾಡುವ ಪ್ರದೇಶಗಳಾದ ಮಹಾರಾಷ್ಟ್ರ, ಆಂದ್ರಪ್ರದೇಶ,ಕೇರಳದ ಇತರ ಪ್ರದೇಶಗಳು ನಮ್ಮ ರಾಜ್ಯಕ್ಕೆ ಸೇರ್ಪಡೆ ಮಾಡಬೇಕೆಂದು ಹಲವಾರು ದಿನಗಳಿಂದ ಹೋರಾಟ ನಡೆಯುತ್ತಿದೆ ಎಂದು ಹೇಳಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರವೀಂದ್ರನಾಥ ಹೊಸ್ಮನಿ ಮಾತನಾಡಿ, ರಾಜ್ಯ ಸರ್ಕಾರ ಕನ್ನಡವನ್ನು ಅನ್ನ, ಉದ್ಯೋಗದ ಭಾಷೆಯಾಗಿ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಿಗೆ ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ, ಬಿಸಿಯೂಟ ನಿರ್ದೇಶಕರಾದ ಸೂರ್ಯವಂಶಿ, ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ರಾಯಪ್ಪಗೌಡ ಹುಡೇದ,ಪಿಎಸ್ಐ ಸೋಮಲಿಂಗಪ್ಪ, ಕನ್ನಡ ಸಂಘಟನೆ ಒಕ್ಕೂಟದ ಮೌನೇಶ ಹಳಿಸಗರ, ಸೇರಿದಂತೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಶಿಕ್ಷಕರು ಉಪಸ್ಥಿತರಿದ್ದರು.ರಾಜ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ವಿಜೇತರಿಗೆ ತಾಲೂಕು ಆಡಳಿತದ ವತಿಯಿಂದ ಬಹುಮಾನ ವಿತರಿಸಲಾಯಿತು.

About The Author