ಡಿಡಿಯು ಶಿಕ್ಷಣ ಸೇವಾ ಸಂಸ್ಥೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ಶಹಾಪುರ : ಇಂದು ಡಿಡಿಯು ಶಿಕ್ಷಣ ಸೇವಾ ಸಂಸ್ಥೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ದಿನವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಸಂಸ್ಥೆಯ ಕಾರ್ಯದರ್ಶಿ ದೇವಿಂದ್ರಪ್ಪ ಮೇಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,1956 ನವೆಂಬರ್ ಒಂದರಂದು ಪ್ರಾಂತವಾರು ಮೈಸೂರು ರಾಜ್ಯವನ್ನಾಗಿಸಲಾಯಿತು.ಆಗಿನ ಮುಂಬೈ ಮದ್ರಾಸ್ ಹೈದ್ರಾಬಾದ ಕೊಡಗು ಪ್ರಾಂತ್ಯಗಳನ್ನು ವಿಲೀನಗೊಳಿಸಿ ವಿಶಾಲ ಮೈಸೂರು ರಾಜ್ಯ ನಿರ್ಮಾಣವಾಯಿತು. ನಂತರ ಡಿ ದೇವರಾಜ ಅರಸು ಮುಖ್ಯಮಂತ್ರಿಯಾದ ನಂತರ 1973 ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. ಇಂದು ನಾಡಿನಾದ್ಯಂತ ಕರ್ನಾಟಕ ಎಂದು ಮರುನಾಮಕರಣಗೊಂಡ ಸುಧಿನವನ್ನು ಸುವರ್ಣ ಮಹೋತ್ಸವ ಎಂದು ನಾವೆಲ್ಲರೂ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದೇವೆ ಎಂದು ಹೇಳಿದರು. ನಾವೆಲ್ಲ ನಾಡು ನುಡಿ ನೆಲ ಜಲ ಭಾಷೆ ಸಾಹಿತ್ಯ ಸಂಸ್ಕೃತಿ ಬಗ್ಗೆ ತಿಳಿದುಕೊಳ್ಳುವ ತಿಳಿಸುವ ಬೆಳೆಸುವ ಕಾರ್ಯ ಮಾಡೋಣ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author