ಹೈಕಮಾಂಡ್ ಸೂಚಿಸಿದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿ ಪ್ರಿಯಾಂಕ್ ಖರ್ಗೆ

Bangalur ಶಹಪುರ : ಕಾಂಗ್ರೆಸ್ ರಾಜ್ಯದಲ್ಲಿ ಬಹುಮತ ಪಡೆದ ನಂತರ ನಾಲ್ಕು ಜನರ ಮಧ್ಯದಲ್ಲಿ ದೆಹಲಿಯಲ್ಲಿ ಏನು ನಡೆದಿದೆಯೋ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಆದ ಹೈಕಮಾಡಿನ ತತ್ವ ಸಿದ್ಧಾಂತಗಳಿವೆ. ಹೈ ಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವು ಕೇಳಬೇಕು. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯ .ಹೈಕಮಾಂಡ್ ಸೂಚಿಸಿದರೆ ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಹೇಳಿದರು. ಎಲ್ಲವೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾರ್ಮಿಕವಾಗಿ ನುಡಿದರು

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ದಲಿತ ಸಿಎಂ ಕೂಗು ಪದೇ ಪದೇ ಕೇಳಿ ಬರುತ್ತಿದೆ.೧೩೫ ಸ್ಥಾನಗಳನ್ನು ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ೬೦ ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು, ಕಲ್ಯಾಣ ಕರ್ನಾಟಕದಲ್ಲಿ ಪಕ್ಷವನ್ನು ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.ಖರ್ಗೆಯವರ ಕುಟುಂಬ ಪಕ್ಷ ನಿಷ್ಠೆ ಕುಟುಂಬವಾಗಿದ್ದು, ಬೇರೆ ಪಕ್ಷದವರು ಬಂದು ಮುಖ್ಯಮಂತ್ರಿಯಾದರು.ಪಕ್ಷ ನಿಷ್ಠೆಯವರಿಗೆ ಏಕಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲೇಬೇಕು.

ಬಸವರಾಜ ಅತ್ನೂರು  ಶಹಪುರ

About The Author