ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಅರಿಕೇರ.ಜೆ ಗ್ರಾಮ ಪಂಚಾಯಿತಿಯ ಮುಂದೆ ನವೆಂಬರ್ 06ರಂದು ಧರಣಿ

Yadagiri ಹುಣಸಗಿ : ತಾಲೂಕಿನ ಉದ್ಯೋಗ ಖಾತ್ರಿ ಕೆಲಸ ಕೊಡಿ, ಇಲ್ಲದಿದ್ದರೆ ನಿರುದ್ಯೋಗ ಭತ್ಯೆ ಕೊಡಿ ಎಂದು ನವೆಂಬರ್ 6 ಸೋಮವಾರದಂದು ಹುಣಸಿಗಿ ತಾಲೂಕಿನ ಅರಿಕೇರ ಜೆ ಗ್ರಾಮ ಪಂಚಾಯಿತಿ ಮುಂದೆ ಧರಣಿ ನಡೆಸಲಾಗುವುದು ಎಂದು ಹುಣಸಿಗಿ ತಾಲೂಕು ಪ್ರಾಂತ ಕೃಷಿ ಕೂಲಿಕಾರ ಸಂಘದ ಅಧ್ಯಕ್ಷರಾದ ಮಮ್ತಾಜ್ ಬೇಗಂ ತಿಳಿಸಿದ್ದಾರೆ.

ನರೇಗಾದಡಿ ಆಗಸ್ಟ್ ಎಂಟರಂದು ಕಾಮಗಾರಿಗಾಗಿ ಹಲವು ಬಾರಿ ಮನವಿ ಮಾಡಿದ್ದೇವೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ್ದರು.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಳ್ಳು ನೆಪ ಹೇಳಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಆದ್ದರಿಂದ ಈಗಾಗಲೇ ಧರಣಿಗೆ ಸಂಬಂಧಪಟ್ಟಂತೆ ಮುಖ್ಯ ಕಾರ್ಯನಿರ್ವಾಹಕರ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಸೋಮವಾರದಂದು ಬೆಳಗ್ಗೆ 11 ಗಂಟೆಗೆ ಅರಿಕೇರ ಜೆ ಗ್ರಾಮ ಪಂಚಾಯಿತಿಯ ಕಚೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ನೂರಾರು ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದರು.

Leave a Reply

Your email address will not be published. Required fields are marked *