ಬೋಮ್ಮನಹಳ್ಳಿ ಗ್ರಾಮದಲ್ಲಿ ನೀರಿನ ಹಾಹಾಕಾರ

ಶಹಾಪುರ:ವಡಗೇರಾ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು,ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ.ಪ್ರಸ್ತುತ ದಿನಗಳು ಬೇಸಿಗೆ ಕಾಲವಾಗಿರುವುದರಿಂದ ಉರಿ ಬಿಸಿಲಿನಲ್ಲಿ ಮನೆಯಿಂದ ಹೊರ ಬರದಂತಹ ಸ್ಥಿತಿಯಲ್ಲಿ ಗ್ರಾಮಸ್ಥರು ಗ್ರಾಮದಲ್ಲಿ  ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.ವಿಶೇಷವಾಗಿ ಕುಡಿಯುವ ನೀರಿಗಾಗಿ ಸರ್ಕಾರ ಲಕ್ಷಾನುಗಟ್ಟಲೆ ಹಣ ಖರ್ಚು ಮಾಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನೀರನ್ನು ಒದಗಿಸಿಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಪ್ರಯೋಜನವಿಲ್ಲ.ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪೈಪಲೈನ್ ಹಾಳಾಗಿದೆ.ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಿಗೂ ಮತ್ತು ಪಂಚಾಯಿತಿ ಅಧಿಕಾರಿಗಳಿಗೂ ಸಾಕಷ್ಟು ಭಾರಿ ಮನವಿ ಮಾಡಿದರು ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎನ್ನುವುದು ಗ್ರಾಮಸ್ಥರ ಅಳಲಾಗಿದೆ.

 

ಬೋಮ್ಮನಹಳ್ಳಿ ಗ್ರಾಮದಲ್ಲಿ ಮೂರು ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಮ್ಮ ಗ್ರಾಮವಾಗಿದ್ದು,ನೀರಿಗಾಗಿ ಅಳವಡಿಸಿದ ಪೈಪ್ ಲೈನ್ ಗಳು ಹಾಳಾಗಿವೆ.ಕುಡಿಯುವ ನೀರಿಗಾಗಿ ನಿತ್ಯ ನರಕ ಅನುಭವಿಸುತ್ತಿದ್ದೇವೆ.ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದರೂ ನೀರಿನ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ.ತಕ್ಷಣವೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.

ಮಲ್ಲರಾಯ ನಾಟೇಕಾರ್
ಗ್ರಾಮದ ಮುಖಂಡ

About The Author