ಕುರಿ ಮತ್ತು ಮೇಕೆ ಮಹಾಮಂಡಳಿ ಅಧ್ಯಕ್ಷರಿಗೆ ಸನ್ಮಾನ

ಯಾದಗಿರಿ:ಬೆಂಗಳೂರಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯಲ್ಲಿ,ಕರ್ನಾಟಕ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣು ಬಿ ತಳ್ಳಿಕೇರಿಯವರನ್ನು ಯಾದಗಿರಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಸಹಕಾರಿ ಸಂಘಗಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸನ್ಮಾನಿಸಿ ಗೌರವಿಸಿದರು.

ಬಲಭೀಮ ಮಡ್ನಾಳ ಸಂಗೋಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘ ಮಡ್ನಾಳ,ಶರಭಣ್ಣ ರಸ್ತಾಪುರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘ ರಸ್ತಾಪುರ,ನಿಂಗಣ್ಣ ರಾಜಾಪುರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘ ಹೊಸಕೇರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *