ಯಾದಗಿರಿ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂ.ಗೆ ಶಾಸಕರ ಮನವಿ !

ವಡಗೇರಾ : ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು  ಭೇಟಿ ಮಾಡಿ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚೆ ಮಾಡಿ ಯಾದಗಿರಿ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ. ವಡಗೇರಾ ತಾಲೂಕು ಅಭಿವೃದ್ಧಿ ಜೊತೆಗೆ ತಾಲೂಕಿನಲ್ಲಿ ವಿವಿಧ ತಾಲೂಕು ಕಚೇರಿಗಳನ್ನು ಆರಂಭಿಸುವಂತೆ ವಿನಂತಿಸಿದರು ಎನ್ನಲಾಗಿದೆ.
ಶಾಸಕರ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಂತ ಹಂತವಾಗಿ ಯಾದಗಿರಿ ಮತಕ್ಷೇತ್ರ ಹಾಗೂ ವಡಗೇರಾ ತಾಲೂಕಿಗೆ ಹೆಚ್ಚಿನ ಅನುದಾನ ಒದಗಿಸಿ ತಾಲೂಕು ಕಚೇರಿಗಳನ್ನು ಆರಂಭಿಸುವುದರ ಜೊತೆಗೆ  ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು ಎಂದು ಶಾಸಕರ ಆಪ್ತರು ತಿಳಿಸಿದರು.

Leave a Reply

Your email address will not be published. Required fields are marked *