ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ವಿಶೇಷ ಅಭಿಯಾನ : ಪ್ರಜಾಪ್ರಭುತ್ವ ಸದೃಢಗೊಳಿಸಲು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ : ಸೋಮಶೇಖರ ಬಿರಾದಾರ

ಕರುನಾಡು ವಾಣಿ ವಾರ್ತೆ 

* ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ವಿಶೇಷ ಅಭಿಯಾನ.
* ಪ್ರಜಾಪ್ರಭುತ್ವ ಸದೃಢಗೊಳಿಸಲು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ.
* ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ ಕರೆ

ಶಹಾಪುರ : ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಸದೃಢಗೊಳಿಸಲು 17 ವರ್ಷ ಮೇಲ್ಪಟ್ಟ ಹಾಗೂ 18 ತುಂಬಿದ ಯುವಕ-ಯುವತಿಯರು ತಪ್ಪದೇ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವುದು ಅಗತ್ಯವಿದೆ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ ಅವರು ಹೇಳಿದರು.

ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನ.19ರಂದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ವಿಶೇಷ ಅಭಿಯಾನದಡಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಶಹಾಪುರ ತಾಲೂಕಿನ ಸರಕಾರಿ ಪದವಿ ಪೂರ್ವ ಬಾಲಕೀಯರ ಹಾಗೂ ಬಾಲಕರ ವಸತಿ ನಿಲಯಗಳಲ್ಲಿ ಹಮ್ಮಿಕೊಂಡ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್)ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವ ವಿಶೇಷ ಅಭಿಯಾನದ ಅಂಗವಾಗಿ ಗ್ರಾಮಿಣ ಪ್ರದೇಶದ ಪ್ರತಿ ಮನೆ-ಮನೆಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುತ್ತಾರೆ, ಅಲ್ಲದೇ, ಹೆಸರು ನೋಂದಣಿಗೆ ಅಗತ್ಯವಾದ ದಾಖಲಾತಿಗಳನ್ನು ಯುವ ಮತದಾರರಿಂದ ಪಡೆದು ಬಿಎಲ್‌ಒ ಅವರಿಗೆ ನೀಡಲಿದ್ದು, ವಿಶೇಷ ಅಭಿಯಾನದ ಅಂಗವಾಗಿ ವಿವಿಧ ಜನ ಜಾಗೃತಿ ಕಾರ್ಯಕ್ರಮಗಳ ಮೂಲಕ ಪ್ರಚಾರ ಮಾಡಲಾಗುತ್ತದೆ ಎಂದು ತಿಳಿಸಿದರು.

ಮತದಾರರಲ್ಲಿ ಮತದಾನದ ಶಿಕ್ಷಣಕ್ಕಾಗಿ ಭಾರತದ ಚುನಾವಣಾ ಆಯೋಗÀ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಂಡು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ, ಮತದಾರರ ಸಾಕ್ಷರತೆ ಉತ್ತೇಜಿಸುತ್ತದೆ. ಇದು ಬಹು-ಮಧ್ಯಸ್ಥಿಕೆ ಕಾರ್ಯಕ್ರಮವಾಗಿದ್ದು, ನಾಗರಿಕರು, ಮತದಾರರು ಮತ್ತು ಮತದಾರರಿಗೆ ಅವರ ಮತದಾನದ ಅರಿವನ್ನು ಹೆಚ್ಚಿಸಿ, ಅವರ ತಿಳುವಳಿಕೆಯುಳ್ಳ ಭಾಗವಹಿಸುವಿಕೆ ಉತ್ತೇಜಿಸುತ್ತದೆ ಎಂದು ಹೇಳಿದರು.

ಭಾತರದ ಪ್ರತಿಯೊಬ್ಬ 18ವರ್ಷ ಪೂರೈಸಿದ ಅರ್ಹ ಮತದಾರರು ತಮ್ಮ ಮೊಬೈಲ್ ಪೋನ್‌ನಲ್ಲಿ ವೋಟರ್ ಹೆಲ್ಪ್ಲೈನ್ ಆ್ಯಪ್‌ಅನ್ನು ಡೌನ್‌ಲೋಡ್ ಮಾಡಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ತಹಶೀಲ್ದಾರ ಉಮಾಕಾಂತ ಹಳ್ಳೆ ಅವರು ಮಾತನಾಡಿ, ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರ ಪಟ್ಟಿ, ಮತದಾರರ ಭಾವಚಿತ್ರ ಗುರುತಿನ ಚೀಟಿ ಹಾಗೂ ಅರ್ಜಿ ಸಲ್ಲಿಕೆಗೆ ಸಂಬAಧಿಸಿದ ಯಾವುದೇ ಮಾಹಿತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ನೋಂದಾಣಾಧಿಕಾರಿಗಳು, ಸಹಾಯಕ ಮತದಾರರ ನೋಂದಾಣಾಧಿಕಾರಿಗಳು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.

ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳನ್ನು ಕೈಗೊಳ್ಳಲು ಯಾವುದೇ ಅವಕಾಶ ಇರುವುದಿಲ್ಲ, ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು ಎಂದು ಹೇಳಿದರು.

ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಚೌದ್ರಿ, ಶಹಾಪುರ ತಾಲೂಕ ಪಂಚಾಯತ ಸಹಾಯಕ ನಿರ್ದೇಶಕ ಭೀಮರಾಯ ಬಿರಾದಾರ, ವಸತಿ ನಿಲಯಗಳ ಮೇಲ್ವಿಚಾರಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

About The Author