ಬಿ ಎಂ ಪಾಟೀಲರಿಗೆ ಕರ್ನಾಟಕ ಸಾಮಾಜಿಕ ರತ್ನ ಪ್ರಶಸ್ತಿ

yadgiri.ವಡಗೇರಾ : ಕೆಪಿಸಿಸಿ ವಕ್ತಾರರು ಹಾಗೂ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ ಬಿ ಎಂ ಪಾಟೀಲರಿಗೆ ಕರ್ನಾಟಕ ಸಾಮಾಜಿಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ  ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ತಿಳಿಸಿದ್ದಾರೆ.
ಡಿ.23 ರಂದು ಬೆಂಗಳೂರು ನಗರದ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಂಜೆ 5-30ಕ್ಕೆ ಸಮಾರೋಪ ಸಮಾರಂಭದಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಗಾರ,ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *