ನ. 28ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಮೊಣಕಾಲು ಬದಲಿ ಶಸ್ತ್ರಚಿಕಿತ್ಸ ತಪಾಸಣಾ ಶಿಬಿರ

ಶಹಪುರ : ತಾಲೂಕಿನ ಸರಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಕೇರ್ ಸಂಯುಕ್ತಾಶ್ರಯದಲ್ಲಿ ನವೆಂಬರ 28ರಂದು ಬೆಳಗ್ಗೆ 10 ಗಂಟೆಯಿಂದ 2 ಗಂಟೆಯವರೆಗೆ ಉಚಿತ ಮೊಣಕಾಲು ಬದಲಿ ಶಸ್ತ್ರಚಿಕಿತ್ಸಾ ತಪಾಸಣಾ ಶಿಬಿರ ನಡೆಯಲಿದೆ ಎಂದು ನಗರ ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿಯದ ಡಿ.ಯಲ್ಲಪ್ಪ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಂಗಳೂರಿನಿಂದ ನುರಿತ ವೈದ್ಯರು ಆಗಮಿಸುತ್ತಿದ್ದು, ದೀರ್ಘಕಾಲದ,ನಿರಂತರ ಮೊಣಕಾಲು ನೋವು, ಜಂಟಿ ನೋವು, ಮೊಣಕಾಲಿನ ಊತ ಸೇರಿದಂತೆ ಬಿಪಿ, ಸಕ್ಕರೆ ಕಾಯಿಲೆ ಸೇರಿದಂತೆ ಹಲವು ಕಾಯಿಲೆಗಳ ಪರೀಕ್ಷೆಗಳನ್ನು ನಡೆಸಲಾಗುವುದು. ಇದರ ಸದುಪಯೋಗವನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕೆಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *