ದ್ವಿತೀಯ ದರ್ಜೆ ಸಹಾಯಕರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ನೇಮಕ !ಪಂಚಾಯತ್ ರಾಜ್ ಇಲಾಖಾ ಆದೇಶ ಗಾಳಿಗೆ ತೂರಿದರಾ ಅಧಿಕಾರಿಗಳು ?

yadgiri. ವಡಗೇರಾ : ತಾಲೂಕಿನ ಬೆಂಡೆಬೆಂಬಳಿ ಗ್ರಾಮ ಪಂಚಾಯಿತಿಗೆ ದ್ವಿತೀಯ ದರ್ಜೆ ಸಹಾಯಕನಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ದ್ವಿತೀಯ ದರ್ಜೆ ಸಹಾಯಕರನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನಾಗಿ ನೇಮಕ ಮಾಡಬಾರದು ಎನ್ನುವ ಪಂಚಾಯಿತ್ ರಾಜ್ ಇಲಾಖಾ ಆದೇಶವಿದ್ದರೂ, ಇಲಾಖೆಯ ಆದೇಶವನ್ನು ಗಾಳಿಗೆ ತೂರಿ ಬೆಂಡೆಬೆಂಬಳಿ ಗ್ರಾಮ ಪಂಚಾಯಿತಿಗೆ ದ್ವಿತೀಯ ದರ್ಜೆ ಲೆಕ್ಕಾಧಿಕಾರಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನಾಗಿ ನೇಮಕ ಮಾಡಿರುವುದು ಕುತೂಹಲ ಮೂಡಿಸಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕಿದೆ. ವಡಗೇರ ತಾಲೂಕಿನಲ್ಲಿ ಸುಮಾರು ನಾಲ್ಕರಿಂದ ಐದು ಜನ ದ್ವಿತೀಯ ದರ್ಜೆ ಸಹಾಯಕರಿದ್ದು, ಉಳಿದವರನ್ನು ಹೊರತುಪಡಿಸಿ ಕೇವಲ ಒಬ್ಬರಿಗೆ ಮಾತ್ರ ಬೆಂಡೆಬೆಂಬಳಿ ಗ್ರಾಮ ಪಂಚಾಯಿತಿಗೆ ನೇಮಕ ಮಾಡಲಾಗಿದೆ. ಯಾಕೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಪಂಚಾಯತ್ ರಾಜ್ ಇಲಾಖೆಯಿಂದ ದ್ವಿತೀಯ ದರ್ಜೆ ಸಹಾಯಕರಿಗೆ ಮೂಲ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇಲ್ಲದಿದ್ದರೆ ಆ ಪಂಚಾಯಿತಿಗೆ ದ್ವಿತೀಯ ದರ್ಜೆಯ ಸಹಾಯಕರನ್ನು ನೇಮಕ ಮಾಡಬಹುದು ಎನ್ನುವ ಆದೇಶ ಕೆಲವೇ ದಿನಗಳ ಹಿಂದೆ ಆದೇಶಿಸಲಾಗಿತ್ತು. ಆದರೆ 2 ರಿಂದ 3 ದಿನಗಳಲ್ಲಿಯೇ ಮರು ಆದೇಶ ಪ್ರಕಟಗೊಂಡಿದ್ದು. 2018ರಲ್ಲಿಯೇ ಎಂದು ಮರು ಆದೇಶಿಸಲಾಗಿದೆ. ಇದರಿಂದ ದ್ವಿತೀಯ ದರ್ಜೆ ಸಹಾಯಕರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನಾಗಿ ನೇಮಕ ಮಾಡಲು ಬರುವುದಿಲ್ಲ ಎನ್ನುವ ಅರ್ಥ ಕಲ್ಪಿಸುತ್ತದೆಯೇ ?.

ಬೆಂಡೆಬೆಂಬಳಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಮೂಲತಹ ಬೆಂಡೆ ಬೆಂಬಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕನಲ್ಲ. ಹಾಗಾದರೆ ಪಂಚಾಯಿತಿ ಅಭಿವೃದ್ಧಿ ಹುದ್ದೆಯನ್ನು ಆತನಿಗೆ ಕೊಡಲಾಗಿದೆ. ತಾಲೂಕಿನ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು. ಒಬ್ಬ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಎರಡರಿಂದ ಮೂರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸಲು ನೇಮಕ ಮಾಡಲಾಗಿದೆ. ಅದರ ಬಗ್ಗೆ ಜಿಲ್ಲಾ ಪಂಚಾಯಿತಿಯು ಗಮನಹರಿಸಬೇಕಿದೆ. ಜಿಲ್ಲೆ ಮತ್ತು ತಾಲೂಕು ಕಚೇರಿಗಳಲ್ಲಿ ಹಲವಾರು ಜನ ಪಿಡಿಓ,ಪ್ರಥಮ ದರ್ಜೆ ಸಹಾಯಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅವರನ್ನು ಯಾಕೆ ಪಂಚಾಯಿತಿಗಳಿಗೆ ನೇಮಕ ಮಾಡಿಲ್ಲ ಎನ್ನುವುದು ತಿಳಿಯುತ್ತಿಲ್ಲ. ಇದರ ಬಗ್ಗೆ ಮೇಲಾಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

About The Author