ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗಾಗಿ ಮನವಿ

ಶಹಾಪು : ಸುಮಾರು 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ರಾಜ್ಯದಲ್ಲಿ 11000ಕ್ಕೂ ಹೆಚ್ಚಿನ ಜನರು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ಹೊರ ರಾಜ್ಯಗಳಾದ ಪಂಜಾಬ್ ದೆಹಲಿ ಹರಿಯಾಣ ಮತ್ತು ಕೇರಳ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವಾ ಭದ್ರತೆ ಕಲ್ಪಿಸಿಕೊಡಲಾಗಿದೆ. ಅದೇ ರೀತಿಯಾಗಿ ನಮ್ಮ ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವಾ ಭದ್ರತೆ ಒದಗಿಸಿ ಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ವೆಂಕಟೇಶ ಬೊನೇರ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಅವರು ಹೆಚ್ಚು ದಿನಗಳ ಕಾಲ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ.ಸರಕಾರ ಅತಿಥಿ ಶಿಕ್ಷಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ. ಆದ್ದರಿಂದ ನಮ್ಮ ರಾಜ್ಯದ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವಾ ಭದ್ರತೆಯನ್ನು ಒದಗಿಸಬೇಕು. ಅವರ ಕುಟುಂಬಕ್ಕೆ ಸರಕಾರ ಆಸರೆಯಾಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೇವಣಸಿದ್ದಯ್ಯ ಡೆಂಗಿಮಠ, ಭೀಮು ಕಾಂಗ್ರೇಸ್, ಗೌಡಪ್ಪ ಕೋರಿ, ನಾಗು ಅವಂಟಿ, ಶರಣು ಕಾಡಂಗೇರಾ, ಮಾರುತಿ ಚೆಂಡು, ಚಂದ್ರು, ಭೀಮು ಇನ್ನಿತರರು ಇದ್ದರು.

About The Author