ನನ್ನ ಅಳಿಲು ಸೇವೆಗೆ ಸಿಕ್ಕ ಗೌರವ : ಪಾಟೀಲ್

ಬೆಂಗಳೂರು : ನನ್ನ ಅಳಿಲು ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ನನ್ನನ್ನು ರಾಜ್ಯ ಮಟ್ಟದ ಕರ್ನಾಟಕ ಸಾಮಾಜಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಕೆಪಿಸಿಸಿ ವಕ್ತಾರರು ಹಾಗೂ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ ಬಿ ಎಂ ಪಾಟೀಲ್ ಹೇಳಿದರು.

ಬೆಂಗಳೂರಿನ ನಗರದ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಪತ್ರಕರ್ತರ ಕಾರ್ಯಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ನನ್ನನ್ನು ರಾಜ್ಯ ಮಟ್ಟದ ಸಮಾಜ ಸೇವೆ ಪ್ರಶಸ್ತಿ ನೀಡಿದ್ದಾರೆ.ನನ್ನ ಸಮಾಜ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಕಾರ್ಯನಿರತ ಪತ್ರಕರ್ತರ ಸಂಘ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಧನ್ಯವಾದಗಳು. ನನ್ನ ಹೋರಾಟ ಬದುಕಿನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ನನ್ನ ಸ್ನೇಹಿತರು, ನಾನು ಮಾಡುವ ಸರ್ವ ಕಾರ್ಯಗಳಿಗೆ ಸಹಕಾರ ನೀಡುವುದರ ಮೂಲಕ ನನಗೆ ಬೆಂಬಲವಾಗಿರುವ ಸ್ನೇಹಿತರಿಗೆ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *