ಗೃಹಲಕ್ಷ್ಮಿ ಸಮಸ್ಯೆ ಪರಿಹರಿಸಲು ಡಿ. 27ರಿಂದ 29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪಸ್

ಶಹಾಪುರ : ಸರ್ಕಾರದ ಸೂಚನೆಯಂತೆ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯದ ಗೃಹಲಕ್ಷ್ಮಿ ಯೋಜನೆ ಪ್ರತಿ ಬಡ ಕುಟುಂಬಕ್ಕೆ 2000 ರೂ. ಸರ್ಕಾರದಿಂದ ನೇರ ವರ್ಗಾವಣೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಆದರೆ ಕೆಲವು ತೊಂದರೆಗಳಿರುವುದರಿಂದ ಕೆಲವು ಕುಟುಂಬಗಳಿಗೆ ಜಮಾ ಆಗುತ್ತಿಲ್ಲ. ಆದ್ದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪಸ್ ಗಳನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಂಡು ಸಮಸ್ಯೆಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ ಬಿರೆದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆ ತೆಗೆಯುವುದು, ಇ- ಕೆವೈಸಿ ಅರ್ಜಿಗಳ ಸ್ಥಿತಿ ಪರಿಶೀಲನೆ ಹಾಗೂ ಗೃಹಲಕ್ಷ್ಮಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಇಂಡಿಯಾ ಪೋಸ್ಟ್ ಪೇಮೆಂಟ್, ಬ್ಯಾಂಕ್ ಅಧಿಕಾರಿಗಳು, ಗ್ರಾಮ ವನ್ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *