ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಸಿಎಂ ಹೇಳಿಕೆಗೆ ಬಿ ಎಂ ಪಾಟೀಲ್ ಸ್ವಾಗತ

ಬಳ್ಳಾರಿ : ಇತ್ತೀಚಿಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ಮೇಲೆ ಕನ್ನಡ ನಾಮಫಲಕ ಬರವಣಿಗೆ ಹಾಕಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯು ಪ್ರತಿಭಟನೆ ನಡೆಸಿತು.ಇದನ್ನು ಮನಗಂಡ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಕನ್ನಡಕ್ಕೆ ಮೊದಲ ಆದ್ಯತೆ ಎಂದು ಹೇಳುವುದರ ಮೂಲಕ ಕನ್ನಡಕ್ಕೆ ಮೊದಲ ಆದ್ಯತೆಯನ್ನು ಕೊಡಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನು ಕೆಪಿಸಿಸಿ ವಕ್ತಾರರು ಹಾಗು ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಬಿ.ಎಮ್. ಪಾಟೀಲ್ ಸ್ವಾಗತಿಸಿದ್ದಾರೆ.

ಮುಖ್ಯಮಂತ್ರಿಗಳು 2018ರಲ್ಲಿಯೇ ರಾಜ್ಯದಲ್ಲಿ ಶೇ‌.60ರಷ್ಟು ಕನ್ನಡದಲ್ಲಿ ಮತ್ತು ಶೇ.40ರಷ್ಟು ಇಂಗ್ಲಿಷ್ ನಲ್ಲಿ ನಾಮಫಲಕ ಇರುವಂತೆ ಆದೇಶಿಸಿದ್ದರು. ಅದನ್ನು ಪುನಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಆದೇಶ ಹೊರಡಿಸಲು ಸಿದ್ದತೆ ನಡೆಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳಲ್ಲಿ ಶೇಕಡ 60 ಮತ್ತು 40ರ ಅನುಪಾತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಲು ಮಾಡುವಂತೆ ತಿಳಿಸಿದ್ದಾರೆ, ಮುಖ್ಯಮಂತ್ರಿಗಳ ನಿರ್ಧಾರ ಅತ್ಯಂತ ಸ್ವಾಗತವಾಗಿದೆ. ಇದನ್ನು ರಾಜ್ಯದ ಕನ್ನಡಿಗರಾದ ನಾವೆಲ್ಲರೂ ಗಂಭೀರವಾಗಿ ತೆಗೆದುಕೊಂಡು ಎಲ್ಲ ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸಬೇಕು ಎಂದು ರಾಜ್ಯದ ಜನತೆಗೆ ಮನವಿ ಮಾಡಿದರು.

About The Author