ಕೆಪಿಸಿಸಿ ರಾಜ್ಯ ಕಾರ್ಯಕಾರಣಿ ಸದಸ್ಯತ್ವಕ್ಕೆ ವೆಂಕಟೇಶ್ ಆಲೂರು ರಾಜೀನಾಮೆ

ಶಹಾಪುರ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ (SC) ವಿಭಾಗದ ರಾಜ್ಯ ಕಾರ್ಯಕಾರಣಿ ಸದಸ್ಯತ್ವ ಸ್ಥಾನಕ್ಕೆ ವೆಂಕಟೇಶ ಆಲೂರು ರಾಜಿನಾಮೆ ನೀಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ಸಂಸಾರಿಕ ತೊಂದರೆಯಿಂದ ಹಾಗೂ ನನ್ನ ಆರೋಗ್ಯದ ದೃಷ್ಟಿಯಿಂದ ಪಕ್ಷದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಾನು ಸ್ವಇಚ್ಛೆಯಿಂದ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ.ರಾಜೀನಾಮೆ ಪತ್ರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್. ಧರ್ಮಸೇನ ರವರಿಗೆ ನೀಡಿದ್ದು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *