ಅಕ್ಕಿ ಕಳ್ಳತನ ಪ್ರಕರಣ : ನಿಜವಾದ ಅಪರಾಧಿಗಳನ್ನು ಬಂಧಿಸುವಂತೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಪಾದಯಾತ್ರೆ

ಅಕ್ಕಿ ಕಳ್ಳತನ ಪ್ರಕರಣ : ನಿಜವಾದ ಅಪರಾಧಿಗಳನ್ನು ಬಂಧಿಸುವಂತೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಪಾದಯಾತ್ರೆ
ಶಹಾಪುರ : ಅಕ್ಕಿ ಕಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಇಂದು ನಗರದ ಬಸವೇಶ್ವರ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆ ವತಿಯಿಂದ  ಯಾದಗಿರಿ ಜಿಲ್ಲಾ ಕಛೇರಿಯವರೆಗೆ ಪಾದಯಾತ್ರೆ ಮಾಡುವ ಮೂಲಕ ನಿಜವಾದ ಅಪರಾಧಿಗಳನ್ನು ಬಂದಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ಬಸವರಾಜ ಪಡುಕೋಟೆ ಮಾತನಾಡಿ, ಪೊಲೀಸರು ನಿಜವಾದ ಅಪರಾಧಿಗಳನ್ನು ಬಂಧಿಸಿಲ್ಲ.ಅಕ್ಕಿ ನಾಪತ್ತೆ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ತೆಗೆದುಕೊಳ್ಳಬೇಕು.ನಿಜವಾದ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು. ನಮ್ಮ ಕರ್ನಾಟಕ ಸೇನೆ ಅಕ್ಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ
ಹೋರಾಟ ಮಾಡುತ್ತಾ ಬಂದಿದೆ. ನಿಜವಾದ ಅಪರಾಧಿಗಳು ನಗರದಲ್ಲಿಯೇ ರಾಜಾರೋಷವಾಗಿ ಓಡಾಡುತ್ತಿದ್ದಾರೆ.ಅಪರಾಧಿಗಳನ್ನು ಬಂಧಿಸದಿದ್ದರೆ ರಾಜ್ಯದ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪಾದಯಾತ್ರೆಯಲ್ಲಿ ರಾಜ್ಯಾಧ್ಯಕ್ಷರಾದ ಬಸವರಾಜ ಪಡಕೋಟೆ, ಪ್ರಧಾನ ಸಂಚಾಲಕರಾದ ಭೀಮಣ್ಣ ಶಾಖಾಪುರ, ಶಹಾಪುರ ನಮ್ಮ ಕರ್ನಾಟಕ ಸೇನೆಯ ತಾಲೂಕ ಅಧ್ಯಕ್ಷ ಸಿದ್ದು ಪಟ್ಟೇದಾರ್, ಶ್ರೀದೇವಿ ಕಟ್ಟಿಮನಿ, ಅಂಬರೀಶ್ ತೆಲುಗುರ್, ವೆಂಕಟೇಶ್ ಬೋನೇರ್, ನಿಂಗಪ್ಪ ಮೂಗಿನ, ಶಶಿಪಾಲರೆಡ್ಡಿ, ಸಂಗಮೇಶ ರಾಜಾಪುರ ಸೇರಿದಂತೆ ನೂರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು
ಅಕ್ಕಿ ನಾಪತ್ತೆ ಪ್ರಕರಣದಲ್ಲಿ ಪೊಲೀಸ್ ಇಲಾಖೆಯವರೂ ಶಾಮೀಲಾಗಿದ್ದಾರೆ, ಯಾರು ಕಳ್ಳತನ ಮಾಡಿದ್ದಾರೆ ಎಂದು ಅವರಿಗೆ ಗೊತ್ತಿದೆ. ಆದರೂ ನಿಜವಾದ ಕಳ್ಳರನ್ನು ಬಂಧಿಸುತ್ತಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೂಡಲೇ ನಿಜವಾದ ಅಪರಾಧಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಸಿಓಡಿ ತನಿಖೆಗೆ ಸರ್ಕಾರ ಆದೇಶಿಸಬೇಕು.
ಭೀಮಣ್ಣ ಶಖಾಪುರ
 ರಾಜ್ಯ ಸಂಚಾಲಕರು ನಮ್ಮ ಕರ್ನಾಟಕ ಸೇನೆ 

About The Author