ಗ್ರಾಮ ಪಂಚಾಯಿತಿ ನಿರ್ಲಕ್ಷ : ರಸ್ತೆಯ ಮೇಲೆ ಹರಿಯುತ್ತಿರುವ ಚರಂಡಿ ನೀರು

ರಾಯಚೂರು : ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿರುವುದರಿಂದ ಜನರು ಓಡಾಡಲು ಆಗಲಾರದಂತ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಹೊಸ ಬಸ್ ನಿಲ್ದಾಣದಿಂದ ಹೊನ್ನಟಗಿ, ಖಾನಾಪುರಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿವೆ.ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿಗಳಿಂದಾಗಿ ಬಳಕೆಯ ನೀರು ರಸ್ತೆಗೆ ಮೇಲೆ ಹರಿಯುತ್ತಿವೆ.

ಗ್ರಾಮ ಪಂಚಾಯಿತಿಯ ನಿರ್ಲಕ್ಷದಿಂದ ಸುಮಾರು ದಿನಗಳಿಂದಲೂ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಗ್ರಾಮ ಪಂಚಾಯಿತಿ ಆಡಳಿತ ನಿರ್ಲಕ್ಷ ವಹಿಸಿದೆ. ಸ್ವಚ್ಛ ಭಾರತ ಅಭಿಯಾನಕ್ಕಾಗಿ ಸರಕಾರ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡುತ್ತಿದೆ.ಆದರೂ ಸ್ವಚ್ಛತೆ ಮರೀಚಿಕೆಯಾಗಿದೆ. ಅಧಿಕಾರಿಗಳು, ಗ್ರಾಮೀಣ ಆಡಳಿತ ನಿರ್ಲಕ್ಷ್ಮವಹಿಸಿದೆ. ಚರಂಡಿ ನೀರನ್ನು ಚರಂಡಿಗೆ ಬಿಡುವ ವ್ಯವಸ್ಥೆ ಮಾಡಬೇಕಿದೆ.

Leave a Reply

Your email address will not be published. Required fields are marked *