ನಾಳೆ ತಿಂಥಣಿ ಬ್ರಿಜ್ ಗೆ ಸಿಎಂ ಸಿದ್ದರಾಮಯ್ಯ | ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಂತಗೌಡ ಮನವಿ

ಶಹಪುರ : 2024 ರ ಹಾಲುಮತ ಸಂಸ್ಕೃತಿ ವೈಭವವು ತಿಂಥಣಿ ಬ್ರಿಜ್ ನಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದು, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಗಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಮಿಸುತ್ತಿದ್ದು,ಹಾಲುಮತ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಕುರಿ ಮತ್ತು ಮೇಕೆ ಮಹಾಮಂಡಳಿ ರಾಜ್ಯ ನಿರ್ದೇಶಕರಾದ ಶಾಂತಗೌಡ ನಾಗನಟಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೂಜ್ಯರಾದ ಶ್ರೀ ಸಿದ್ದರಮಾನಂದಪುರಿ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪೂಜ್ಯರಾದ ಶ್ರೀ ಶಿವಾನಂದ ಮಹಾಸ್ವಾಮಿಗಳು ಕನಕ ಗುರುಪೀಠ, ಮಾಜಿ ಸಂಸದರಾದ ಎಚ್ ವಿಶ್ವನಾಥ, ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪಗೌಡ ದರ್ಶನಾಪುರ,ಎನ್ ಎಸ್ ಬೋಸರಾಜ್, ಶಾಸಕರಾದ ಹಂಪನಗೌಡ ಬಾದರ್ಲಿ, ಅಜಯ್ ಸಿಂಗ್ ಹಾಗೂ ಪಂಡಿತ್ ರಾವ್ ಚಿದ್ರಿ ಸೇರಿದಂತೆ ಇತರ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *