ತಿಂಥಣಿ ಬ್ರಿಜ್ ಗೆ ಸಿಎಂ ಸಿದ್ದರಾಮಯ್ಯ | ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ

ಶಹಪುರ : ತಿಂಥಣಿ ಬ್ರಿಜ್ ನಲ್ಲಿ ನಡೆಯುತ್ತಿರುವ ಹಾಲುಮತ ಸಂಸ್ಕೃತಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯನವರು ನಾಳೆ ಆಗಮಿಸಲಿದ್ದು ಕುರುಬ ಸಮಾಜದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಹಾಲುಮತ ಸಂಸ್ಕೃತಿ ವೈಭವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳವಂತೆ ಶಹಾಪುರ ತಾಲೂಕು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಶರಬಣ್ಣ ರಸ್ತಾಪುರ, ಕಾರ್ಯಾಧ್ಯಕ್ಷರಾದ ಸಿದ್ದಪ್ಪ ಚಟ್ಟಳ್ಳಿ ಕನ್ಯಾಕೋಳೂರು,ಖಜಾಂಚಿಯಾದ ಬಲಭೀಮ ಮಡ್ನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು,ಪೂಜ್ಯರಾದ ಶ್ರೀ ಸಿದ್ದರಮಾನಂದಪುರಿ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪೂಜ್ಯರಾದ ಶ್ರೀ ಶಿವಾನಂದ ಮಹಾಸ್ವಾಮಿಗಳು ಕನಕ ಗುರುಪೀಠ, ಮಾಜಿ ಸಂಸದರಾದ ಎಚ್ ವಿಶ್ವನಾಥ, ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ಶರಣಪ್ರಕಾಶ್ ಪಾಟೀಲ್, ಎನ್ ಎಸ್ ಬೋಸರಾಜ್, ಶಾಸಕರಾದ ಹಂಪನಗೌಡ ಬಾದರ್ಲಿ, ಅಜಯ್ ಸಿಂಗ್ ಹಾಗೂ ಪಂಡಿತ್ ರಾವ್ ಚಿದ್ರಿ ಸೇರಿದಂತೆ ಇತರ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *