ನಾಳೆ ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ | ಗಬ್ಬೂರಿನ ವೆಂಕಟೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ ಅನ್ನಸಂತರ್ಪಣೆ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆ ನಿಮಿತ್ತ ದೀಪೋತ್ಸವ, ಅನ್ನಸಂತರ್ಪಣೆ ಹಾಗೂ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಅರ್ಚಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಂಕಟೇಶ್ವರ ದೇವಸ್ಥಾನದಲ್ಲಿಯೆ ಅಯೋಧ್ಯೆಯ ಶ್ರೀ ರಾಮ ದೇವರ ಪ್ರತಿಷ್ಠಾಪನೆಯ ನೇರ ಪ್ರಸಾರ ಕಾರ್ಯಕ್ರಮವಿದೆ.ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ.ಅನ್ನ ಸಂತರ್ಪಣೆ ಸಂಜೆ 6 ಗಂಟೆಗೆ ದೀಪೋತ್ಸವ ಕಾರ್ಯಕ್ರಮವಿದೆ ಹಾಗೂ ಭಕ್ತಾದಿಗಳಿಂದ ಭಜನೆ ಕಾರ್ಯಕ್ರಮವಿದ್ದು ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಲು ಕೊರಲಾಗಿದೆ.

Leave a Reply

Your email address will not be published. Required fields are marked *