ಆಶ್ರಮ ಸಮಿತಿ ಅಧ್ಯಕ್ಷ ವಸಂತಕುಮಾರ್ ಸುರಪುರಕರ್ ಗೆ ಮಾತೃ ವಿಯೋಗ

ಶಹಾಪುರ : ನಗರ ಆಶ್ರಯ ಸಮಿತಿ ಅಧ್ಯಕ್ಷರಾದ ವಸಂತಕುಮಾರ್ ಸುರುಪುರಕರ್ ಅವರ ತಾಯಿ ಶ್ರೀಮತಿ ಭೀಮವ್ಬ ಗಂಡ ಮಲ್ಲಪ್ಪ ಸುರಪುರಕರ್ (80) ಹಳಿಪೇಟೆ ಇಂದು ನಿಧನರಾದರು. ದೀರ್ಘಕಾಲದ ‌ನೋವಿನಿಂದ ಬಳಲುತ್ತಿದ್ದ ಶ್ರೀಮತಿ ಭೀಮವ್ವ ನವರು ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾದರು.ಇಬ್ಬರು ಗಂಡುಮಕ್ಕಳು, ಮೂವರು ಹೆಣ್ಣು ಮಕ್ಕಳಿದ್ದು ಮೊಮ್ಮಕ್ಕಳು  ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆ ಸುಮಾರು ಸಮಾಜದ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ‌ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸಣ್ಣ ಕೈಗಾರಿಕಾ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ,ವೆ ಸೇರಿದಂತೆ ಅನೇಕ‌ ಗಣ್ಯರು ಸಂಘಸಂಸ್ಥೆಗಳ ‌ಮುಖ್ಯಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *