ಉದ್ಯೋಗ ಖಾತ್ರಿಯಲ್ಲಿ ಬಾರಿ ಅಕ್ರಮ | ಶಾಲಾ ಮಕ್ಕಳ ಹೆಸರಿನಡಿ ಹಣ ಲೂಟಿ ತನಿಖೆಗೆ ಆಗ್ರಹ

ಶಹಾಪುರ : ತಾಲೂಕಿನ ದೋರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾಲಾ ಮಕ್ಕಳಿಂದ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡಿದ್ದು ಬೆಳಕಿಗೆ ಬಂದಿದ್ದು, 2023-24ನೇ ಕ್ರಿಯಾ ಯೋಜನೆಯಲ್ಲಿ ಒಂದರಿಂದ ಎಂಟನೇ ತರಗತಿ ಮಕ್ಕಳ ಹೆಸರಿನಡಿ ಕಾರ್ಮಿಕ ಕಾರ್ಡನ್ನು ಸಿದ್ಧಪಡಿಸಿಕೊಂಡು ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡಿದ್ದು ಬೆಳಕಿಗೆ ಬಂದಿದೆ.ಇದರ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದು ಪ್ರದೀಪ್ ಅಣಬಿ ಆಗ್ರಹಿಸಿದ್ದಾರೆ.ಬೇವಿನಹಳ್ಳಿ ಗ್ರಾಮ ದೋರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುತ್ತಿದ್ದು ಮಕ್ಕಳ ಹೆಸರಿನಲ್ಲಿ ಕಾರ್ಮಿಕ ಕಾರ್ಡ್ ಸಿದ್ಧಪಡಿಸಿ ಸರ್ಕಾರಕ್ಕೆ ಕೋಟಿಗಟ್ಟಲೆ ಹಣ ದೋಚಿದ್ದಾರೆ.ಗ್ರಾಮದಲ್ಲಿರುವ ಮುರಾರ್ಜಿ ದೇಸಾಯಿ ಶಾಲೆಯ ಪದವಿಪೂರ್ವ ಮಹಾವಿದ್ಯಾಲಯದ ಮಕ್ಕಳ ಹೆಸರಿನಲ್ಲಿಯೂ ಕೂಡ ಉದ್ಯೋಗ ಖಾತ್ರಿಯ ಕೆಲಸಕ್ಕೆ ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಕೂಡಲೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗಮನಹರಿಸಿ ದೋರನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಡಿಇಓ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

About The Author