ಲೋಕಸಭಾ  ಚುನಾವಣೆ : ಸ್ವೀಪ್ ಚಟುವಟಿಕೆ : ಮತದಾರರಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಶಹಾಪುರ: ಲೋಕಸಭಾ  ಚುನಾವಣೆ ಮೇ.7ರಂದು ನಡೆಯುವ ಮತದಾನದ ಕುರಿತು ಗ್ರಾಮೀಣ ಪ್ರದೇಶದ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಹಾಗೂ ತಾಲೂಕ ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಮುಡಬೋಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮತದಾನದ ಕುರಿತು ಜಾಗೃತಿ ಮೂಡಿಸಲು ಗ್ರಾಮ ಪಂಚಾಯತ ಆವರಣದಲ್ಲಿ ಹಲವು ಬಣ್ಣಗಳ ಚಿತ್ತಾಕರ್ಷಣಿಯ ಮತದಾನದ ಕುರಿತು ಜಾಗೃತಿ ಮೂಡಿಸುವ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ನೀಡಲಾಯಿತು. ಮತದಾನ ಹಾಗೂ ಲಿಂಗತ್ವ ದೌರ್ಜನ್ಯ ತಡೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ, ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ವಾಹಿನಿಯ ಧ್ವನಿ ವರ್ಧಕದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಾಯಿತು.
ಪಿಡಿಓ ಸಿದ್ದರಾಮಪ್ಪ ತಾಲೂಕ ಪಂಚಾಯತ ಎನ್‌ಆರ್‌ಎಲ್‌ಎಂ ತಾಲೂಕ ಸಂಯೋಜಕರಾದ ಬಸಲಿಂಗ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಎಂ.ಬಿ.ಕೆ ಹಾಗು ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

About The Author