ಕಾಂಗ್ರೆಸ್ ಗೆಲುವು ಖಚಿತ ಡಾ. ಕೃಷ್ಣಮೂರ್ತಿ ವಿಶ್ವಾಸ

ಶಹಾಪುರ : ರಾಯಚೂರು ಲೋಕಸಭಾ ಕ್ಷೇತ್ರ, ಯಾದಗಿರಿ ಮತ್ತು ರಾಯಚೂರು ಕ್ಷೇತ್ರದಾದ್ಯಂತ ಕಾಂಗ್ರೆಸ್ ಅಲೆ ಇದ್ದು, ಪಕ್ಷದ ಅಭ್ಯರ್ಥಿಯಾದ ಜಿ ಕುಮಾರ್ ನಾಯಕ್ ಅವರ ಗೆಲುವು ನಿಶ್ಚಿತ ಎಂದು ಯಾದಗಿರಿ ಕೆಪಿಸಿಸಿ ವೈದ್ಯಕೀಯ ಘಟಕದ ಜಿಲ್ಲಾಧ್ಯಕ್ಷರಾದ ಡಾ. ಕೃಷ್ಣಮೂರ್ತಿ ಅವರು ತಿಳಿಸಿದರು.ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮ ಪಕ್ಷ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಪಕ್ಷ ಯಾವತ್ತೂ ಬಡವರ ಪಕ್ಷವಾಗಿದ್ದು, ದೀನ ದಲಿತರ ಪರ ಕೆಲಸ ಮಾಡುತ್ತದೆ. ಜಿ ಕುಮಾರ್ ನಾಯಕ್ ಅವರು ಈಗಾಗಲೇ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಈಗ ಜನಸೇವೆಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು,ಮತದಾರರು ಕಾಂಗ್ರೆಸ್ ಪಕ್ಷದ ಪರ ಮತ ಚಲಾಯಿಸಿ ಗೆಲುವು ತಂದು ಕೊಡುವರು ಎನ್ನುವ ವಿಶ್ವಾಸ ಇದೆ ಎಂದರು.

ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ರವರು ಕ್ಷೇತ್ರದಲ್ಲಿ ಪಕ್ಷದ ಗೆಲುವಿಗಾಗಿ ಹೆಚ್ಚಾಗಿ ಶ್ರಮಿಸುತ್ತಿದ್ದಾರೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರ ತವರು ರಾಜ್ಯವಾದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನವನ್ನು ಗೆಲ್ಲಿಸಿಕೊಡಬೇಕಿದೆ.

ಗುರುಮಿಟ್ಕಲ್ ಕ್ಷೇತ್ರ ಕಲಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತಿದ್ದು,ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಾಬುರಾವ್ ಚಿಂಚನಸೂರ ಅವರ ಅಪಘಾತದಿಂದ ಚುನಾವಣೆಯಲ್ಲಿ ಅವರೇ ಸ್ಪರ್ಧಿಸಿದ್ದು  ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬಾಬುರಾವ್ ಚಿಂಚನಸೂರ್ ಗುರುಮಿಟ್ಕಲ್ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಪ್ರಚಾರ ಕೈಗೊಂಡಿದ್ದು ಕಲಬುರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲೀಡ್ ಬರುವ ವಿಶ್ವಾಸವಿದೆ.

ಯಾದಗಿರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಅನ್ಪೂರ್ ಒಳಗೊಂಡು ಪಕ್ಷದ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರ ಶ್ರಮ ಹೆಚ್ಚಿದ್ದು ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಜಿ.ಕುಮಾರ್ ನಾಯಕ್ ರವರ ಗೆಲುವು ನಿಶ್ಚಿತ ಎಂದು ತಿಳಿಸಿದರು.

About The Author