10ನೇ ತರಗತಿ ಫಲಿತಾಂಶ : ಸರ್ಕಾರಿ ಕನ್ಯಾ ಪ್ರೌಢಶಾಲೆಗೆ ಶೇ.58 ಫಲಿತಾಂಶ ದಾಖಲು

ಶಹಾಪುರ : 2023-24 ನೇ ಸಾಲಿನ 10ನೇ ತರಗತಿ ಫಲಿತಾಂಶದಲ್ಲಿ ಸರಕಾರಿ ಕನ್ಯಾ ಪ್ರೌಢಶಾಲೆಗೆ ಶೇ. 58 ರಷ್ಟು ಫಲಿತಾಂಶ ದಾಖಲಾಗಿದ್ದು, ಪರೀಕ್ಷೆಗೆ ಹಾಜರಾದ 301 ವಿದ್ಯಾರ್ಥಿನಿಯರಲ್ಲಿ ಮೂರು ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 11 ವಿದ್ಯಾರ್ಥಿನಿಯರು ಉನ್ನತ ಶ್ರೇಣಿ,52 ವಿದ್ಯಾರ್ಥಿನಿಯರು ಪ್ರಥಮ ಸ್ಥಾನ, 60 ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ, 49 ವಿದ್ಯಾರ್ಥಿನಿಯರು ತೃತೀಯ ಸ್ಥಾನದಲ್ಲಿ ತೇರ್ಗಡೆ ಹೊಂದಿದ್ದಾರೆ.ಆಫ್ರನಾಜ್ 584(ಶೇ.93.12),ಲಾಲ್ ಮುನ್ನಿ 579(ಶೇ.92.64) ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರು. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಉಪ ಪ್ರಾಚಾರ್ಯರಾದ ವೆಂಕೋಬ ಪಾಟೀಲ್ ಮತ್ತು ಶಾಲಾ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *