ದೇಶದ ಆರ್ಥಿಕ ಸ್ಥಿತಿ ಚಿಂತಾಜನಕ: ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಬಿಜೆಪಿ ಸರ್ಕಾರದ ಸಾಧನೆ: ದರ್ಶನಾಪುರ

ಶಹಾಪುರ: ದೇಶದ ಆರ್ಥಿಕ ಸ್ಥಿತಿ ಚಿಂತಾ ಜನಕವಾಗಿದೆ.ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿವೆ.ದಿನಸಿ ಪದಾರ್ಥಗಳ ಬೆಲೆಗಳು ಕೂಡ ಪೆಟ್ರೋಲ್ ಮತ್ತು ಡೀಸೆಲ್ ದಂತೆ ದಿನಂಪ್ರತಿ ಏರಿಕೆಯಾಗುತ್ತಿದೆ ಎಂದು ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಕಳವಳ ವ್ಯಕ್ತಪಡಿಸಿದರು. ತಾಲೂಕಿನ ದರಿಯಾಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಮರಿಗೌಡ ಹುಲ್ಕಲ್ ರವರ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಾಂಗ್ರೆಸ್ ಪಕ್ಷ ಪಕ್ಷಕ್ಕಾಗಿ ದುಡಿದ ವ್ಯಕ್ತಿಗಳನ್ನು ಗುರುತಿಸಿ ಒಳ್ಳೆಯ ಸ್ಥಾನಮಾನ ಕೊಡುತ್ತದೆ. ಅದಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕವಾದ ಮರಿಗೌಡ ಹುಲ್ಕಲ್ ರವರೆ ಸಾಕ್ಷಿ ಎಂದು ಹೇಳಿದರು.ರಾಷ್ಟ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಧಿಕಾರದಲ್ಲಿದ್ದರೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ಸಾಗುತ್ತವೆ ಎಂದು ಹೇಳುತ್ತಿದ್ದ ಬಿಜೆಪಿ ನಾಯಕರು,ಬೆಲೆ ಏರಿಕೆ ಮತ್ತು ಭ್ರಷ್ಟಾಚಾರವೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು.ಬಡವರಿಗೆ ಉಚಿತವಾಗಿ ಅನ್ನಭಾಗ್ಯ ಕ್ಷೀರಭಾಗ್ಯ ಪಶುಭಾಗ್ಯ ಹಲವಾರು ಭಾಗ್ಯಗಳನ್ನು ನೀಡಿ ಬಡವರಿಗೆ ಮತ್ತು ಶಾಲಾ ಮಕ್ಕಳಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ಕೊಟ್ಟರು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನಿಯಮಿತ ಅನ್ಲಿಮಿಟೆಡ್ ಮನೆಗಳನ್ನು ಕೊಡಲಾಯಿತು. ಆದರೆ ಬಿಜೆಪಿ ಸರಕಾರ ಐದು ವರ್ಷಗಳ ಆಡಳಿತದಲ್ಲಿ ಬಡವರಿಗೆ ಸರಿಯಾದ ರೀತಿಯಲ್ಲಿ ಮನೆಗಳನ್ನು ಹಂಚಿಕೆ ಮಾಡಲಾಗಲಿಲ್ಲ.ನಾಲ್ಕು ವರ್ಷಗಳು ಕಳೆದ ನಂತರ ಈ ವರ್ಷ ಮನೆಗಳನ್ನು ಹಂಚಿಕೆ ಮಾಡಲು ಹೊರಟಿದೆ. ನಾಲ್ಕು ವರ್ಷಗಳವರೆಗೆ ಯಾವುದೇ ಮನೆಗಳನ್ನು ನೀಡದ ರಾಜ್ಯ ಸರ್ಕಾರ, ಚುನಾವಣೆ ವರ್ಷದಲ್ಲಿ ಮನೆಗಳನ್ನು ಹಂಚಿಕೆ ಮಾಡುತ್ತಿದೆ ಎಂದು ಟೀಕಿಸಿದರು.ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳ ಗಮನಹರಿಸದೆ ಭ್ರಷ್ಟಾಚಾರದ ಕಡೆ ಗಮನ ಹರಿಸಿದೆ.ಇಂದು ರೈತರು ಬೀದಿಗೆ ಬಂದಿದ್ದಾರೆ. ಬೀಜ ಮತ್ತು ರಸಗೊಬ್ಬರದ ಬೆಲೆಗಳು ಗಗನಕ್ಕೇರಿವೆ. ರೈತರು ಬೆಳೆದ ಬೆಳೆಗಳಿಗೆ ಬೆಲೆಯಿಲ್ಲದಂತಾಗಿದೆ. ದಿನಸಿ ಪದಾರ್ಥಗಳ ಬೆಲೆಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಹಾಗೆ ದಿನಂಪ್ರತಿ ಏರಿಕೆಯಾಗುತ್ತಿವೆ. ಹೀಗಾದರೆ ಬಡವರು ರಾಷ್ಟ್ರ ಮತ್ತು ರಾಜ್ಯದಲ್ಲಿ ಬದುಕುವುದು ಸಾಧ್ಯವೇ ಎನ್ನುವ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮತದಾರರು ಆಲೋಚಿಸಬೇಕಿದೆ ನನ್ನ ಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಿಗೂ ರಸ್ತೆ ನಿರ್ಮಾಣ ಮಾಡಲಾಗಿದೆ. ರವಿವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಕ್ಷೇತ್ರ ಸಂಚಾರ ಕೈಗೊಳ್ಳುತ್ತಿದ್ದೇನೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಶಾಲೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡಲಾಗಿದೆ. ನನ್ನ ಅಭಿವೃದ್ಧಿ ಕಾರ್ಯಗಳನ್ನು ಮತದಾರರು ವೀಕ್ಷಿಸಬಹುದು ಎಂದು ಹೇಳಿದರು.ಕಾಂಗ್ರೆಸ್ ಮುಖಂಡರಾದ ಶರಣಪ್ಪ ಸಲಾದಪುರ ಮಾತನಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕವಾದ ಮರಿಗೌಡ ಹುಲ್ಕಲ್ ಮತ್ತು ಸ್ಥಳೀಯ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ರವರಿಗೆ ದರಿಯಾಪುರ ಗ್ರಾಮದ ಮುಖಂಡರು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಶಿವು ಮಹಾಂತಪ್ಪ ಸಾಹು ಮಾಜಿ ತಾ.ಪಂ.ಅಧ್ಯಕ್ಷರು, ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳಿ ನಿರ್ದೇಶಕರಾದ ಶಾಂತೇಗೌಡ ನಾಗನಟಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

About The Author