ಡಿಡಿಯು ಶಾಲೆಗೆ 10ನೇ ತರಗತಿಯಲ್ಲಿ ಶೇ.100 ರಷ್ಟು ಫಲಿತಾಂಶ

ಶಹಾಪುರ : ತಾಲೂಕಿನ ದಿ.ದೇವರಾಜ್ ಅರಸು ಶಿಕ್ಷಣ ಸಂಸ್ಥೆಯ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶದಲ್ಲಿ 2023-24 ನೇ ಸಾಲಿನ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶೇ 100 ರಷ್ಟು ಫಲಿತಾಂಶ ದಾಖಲಾಗಿದ್ದು ಶಾಲೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದ 50 ವಿದ್ಯಾರ್ಥಿಗಳಲ್ಲಿ 06 ವಿದ್ಯಾರ್ಥಿಗಳು ಉನ್ನತ ಶ್ರೇಣಿ,, 40 ವಿದ್ಯಾರ್ಥಿಗಳು ಪ್ರಥಮ ದರ್ಜೆ, 04 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಅಂಬರೇಶ ಹೆಚ್ 601(ಶೇ.96.16), ಪ್ರೇಮಾ 597 (ಶೇ.95.52) ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು.ಪರೀಕ್ಷೆಗೆ ಹಾಜರಾದ 50 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಡಿಡಿಯು ಕಾನ್ವೆಂಟ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 94 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 78 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶೇ. 94 ರಷ್ಟು ಫಲಿತಾಂಶ ದಾಖಲಾಗಿದೆ.ವಿಶಾಲ್ ದೊತ್ರೆ-581(ಶೇ.92.96), ಭಾಗ್ಯಶ್ರೀ-597-(ಶೇ.95.52) ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥಾಪಕರಾದ ಡಾ. ಭೀಮಣ್ಣ ಮೇಟಿ, ಕಾರ್ಯದರ್ಶಿ ದೇವಿಂದ್ರಪ್ಪ ಮೇಟಿ, ಮುಖ್ಯೋಪಾಧ್ಯಾಯರಾದ ಯಕ್ಕಪ್ಪ ಕುರಿ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *