ನಾಳೆ ಹಾರಣಗೇರಾ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 133 ನೇ ಜಯಂತೋತ್ಸವ

ಶಹಾಪುರ:ತಾಲೂಕಿನ ಹಾರಣಗೇರಾ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ರಾಯಪ್ಪ ಸಾಲಿಮನಿ ತಿಳಿಸಿದರು. 

ಶಹಾಪುರ ನಗರದ ಸಾರಿಪುತ್ರ ಬುದ್ಧ ವಿಹಾರ ದಮ್ಮಗಿರಿಯ ಪೂಜ್ಯ ಬಂತೆ ಆದಿತ್ಯ ಹಾಗೂ ಚಿಗರಹಳ್ಳಿಯ ಮರುಳ ಶಂಕರ ದೇವರ ಗುರುಪೀಠದ ಸಿದ್ಧಬಸವ ಕಬೀರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕರಾದ ಗುರುಪಾಟೀಲ್ ಶಿರವಾಳ ಹಾಗೂ ಯಾದಗಿರಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಧ್ವಜಾರೋಹಣ ಗೈಯುವರು. ಉಕ್ಕಿನಾಳ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾದ ಶಾಂತಪ್ಪ ಸಾಲಿಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಾಹೇಬ್ ಗೌಡ ಪಾಟೀಲ್, ಗೋಗಿ ಪಿಎಸ್ಐ ದೇವೇಂದ್ರರೆಡ್ಡಿ ಡಾ. ಬಾಬಾಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾವುತಪ್ಪ ಹವಾಲ್ದಾರ್,ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಮೇಶ್ ನಾಯಕ್ ಜ್ಯೋತಿ ಬೆಳಗಿಸಲಿದ್ದು, ಅಶ್ವಿನಿ ಮದನ್ಕರ್ ವಕೀಲರು ಮತ್ತು ಮಹಿಳಾ ಹೋರಾಟಗಾರರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.

About The Author