ಹಿರಿಯ ವೈದ್ಯರನ್ನು ವರ್ಗಾವಣೆ ಮಾಡುವಂತೆ ಪ್ರದೀಪ್ ಅಣವಿ ಆಗ್ರಹ

ಶಹಾಪುರ : ಶಹಪೂರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಹಿರಿಯ ವೈದ್ಯರು ಟಿಕಾಣಿ ಹೂಡಿದ್ದು ಕೂಡಲೇ ಅಂತಹವರನ್ನು ವರ್ಗಾಯಿಸುವಂತೆ ಶ್ರೀ ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರದೀಪ್ ಅಣಬಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಅವರು, ಶಹಪುರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹತ್ತರಿಂದ ಹದಿನೈದು ವರ್ಷಗಳವರೆಗೆ ಹಿರಿಯ ವೈದ್ಯರು ಮತ್ತು ಡಿ ಗ್ರೂಪ್ ವೃಂದದ ಸಿಬ್ಬಂದಿಯವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರು ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಬಾರದೆ ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಈ ಮುಂಚೆ ಹಲವು ಬಾರಿ ಮೇಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರೂ ಕೂಡ ಸರ್ಕಾರದ ಗಮನಕ್ಕೆ ತಾರದೆ ಇರುವುದು ದುರದೃಷ್ಟಕರ.ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಆಸ್ಪತ್ರೆಯ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *