ವಿಧಾನ ಪರಿಷತ್ ಚುನಾವಣೆ : ಈಶಾನ್ಯ ಪದವೀಧರ ಕ್ಷೇತ್ರದಿಂದ ಕಾಂಡ್ರಾ ಸತೀಶ್ ಕುಮಾರ್ ನಾಮಪತ್ರ ವಾಪಸ್

ವಡಗೇರಾ : ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕಾಂಡ್ರಾ ಸತೀಶ್ ಕುಮಾರ್ ಕೊನೆ ಗಳಿಗೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಕರೆಯ ಮೇರೆಗೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಕಾಂಡ್ರಾ ಸತೀಶ್ ಕುಮಾರ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷವು ಒಳ್ಳೆಯ ಸ್ಥಾನಮಾನ ಕೊಡುತ್ತದೆ. ನೀವು ಪಕ್ಷಕ್ಕೆ ದುಡಿಯಿರಿ. ಪಕ್ಷಕ್ಕಾಗಿ ಶ್ರಮಿಸಿದವರನ್ನು ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಮರೆಯುವುದಿಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರರು ಮತ್ತು ಬಳ್ಳಾರಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಬಿಎಮ್ ಪಾಟೀಲ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಇಂದು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಲಾಯಿತು.ಕಾಂಡ್ರಾ ಸತೀಶ್ ಕುಮಾರ್ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸತೀಶ್ ಕುಮಾರರಿಗೆ ಒಳ್ಳೆಯ ಸ್ಥಾನಮಾನ ನೀಡಲಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ ಎಂದು ತಿಳಿಸಿದರು. ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ, ಸೂರಜ್, ನಾಗರಾಜ್ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *