ಮೇ 19ಕ್ಕೆ ಹೊಸ್ಕೇರಾ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಯಾದಗಿರಿ:ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಸಕೆರ ಗ್ರಾಮಕ್ಕೆ ಮೇ.19ರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಗಮಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಗ್ಗೆ ಕಲಬುರ್ಗಿಯ ಮುಖಾಂತರ ಶಹಾಪುರ ತಾಲೂಕಿನ ಹೊಸಕೇರಾ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಸ್ಥಳೀಯ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು,ಮಧ್ಯಾಹ್ನ 12:00 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *