ಸಚಿವ ಶರಣಬಸಪ್ಪ ದರ್ಶನಾಪೂರರವರಿಗೆ ಡಿ.ಸಿ.ಎಂ ಸ್ಥಾನ ನೀಡಲು ಆಗ್ರಹ

    ರಾಯಚೂರು ಲೋಕಸಭಾ, ಶೋರಾಪೂರ ವಿಧಾನಸಭಾ ಮತ್ತು ಈಶಾನ್ಯ ಪದವೀಧರರ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮವಹಿಸಿ ಯಶಸ್ವಿಯಾಗಿರುವ ಸಚಿವ ಶರಣಬಸಪ್ಪಗೌಡ ದರ್ಶನಾಪೂರರವರಿಗೆ ಮುಂಬರುವ ದಿನಗಳಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಕ್ಕಸಗೇರಾ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಹಾದೇವಪ್ಪ ಸಾಹುಕಾರ ಆಗ್ರಹಿಸಿದ್ದಾರೆ.ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಯವರಾದ ಡಿಕೆ ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಲ್ಲಿ ಮನವಿ ಮಾಡುತ್ತಾ, ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಖಾತೆಯನ್ನು ಸಚಿವ ಶರಣಬಸಪ್ಪಗೌಡ ದರ್ಶನಪುರ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *