ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ ಡಿಸಿಎಂ ನೀಡುವಂತೆ ಮನವಿ

ಶಹಾಪುರ : ಲೋಕಸಭಾ ಚುನಾವಣೆಯಲ್ಲಿ ರಾಯಚೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಜಿ. ಕುಮಾರನಾಯಕ ಗೆಲುವಿಗೆ ಹಗಲಿರುಳು ಶ್ರಮಿಸಿದ  ಸಚಿವ ಶರಣಬಸಪ್ಪಗೌಡ ದರ್ಶನಪುರ ಅವರಿಗೆ ಉಪಮುಖ್ಯಮಂತ್ರಿ ಮತ್ತು ಪ್ರಬಲ ಖಾತೆಯನ್ನು ಕೊಡುವಂತೆ ಕಾಂಗ್ರೆಸ್ ಮುಖಂಡರಾದ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಸಿದ್ದಣ್ಣ ಕನ್ಯಾಕೋಳೂರು,ಮಾಜಿ ತಾಲೂಕ ಪಂಚಾಯತಿ ಸದಸ್ಯರಾದ ಶರಬಣ್ಣ ರಸ್ತಾಪುರ, ಗ್ಯಾರಂಟಿ ಯೋಜನೆಯ ತಾಲೂಕು ಸದಸ್ಯರಾದ ಮಲ್ಲನಗೌಡ ತಿಪ್ಪನಟಗಿ  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ರಾಯಚೂರು ಯಾದಗಿರಿ ಜಿಲ್ಲೆಗಳಲ್ಲಿ ಓಡಾಡಿ ಶಹಪುರ ಸುರುಪುರ ಯಾದಗಿರಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ತರುವಲ್ಲಿ ಶ್ರಮಿಸಿದ್ದಾರೆ.ಆದ್ದರಿಂದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಯವರಾದ ಡಿಕೆ ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಲ್ಲಿ ಮನವಿ ಮಾಡುತ್ತಾ, ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಖಾತೆಯನ್ನು ಸಚಿವ ಶರಣಬಸಪ್ಪಗೌಡ ದರ್ಶನಪುರ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *