ದೋರನಹಳ್ಳಿ : ಬಿಸಿ ಊಟ ಸೇವಿಸಿ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ !

ಶಹಾಪುರ : ತಾಲೂಕಿನ ದೋರನಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆ ಪ್ರೌಢಶಾಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೀರೆ ಅಗಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 120 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಆತಂಕಕಾರಿ ಘಟನೆ ಮಧ್ಯಾಹ್ನ ಬಿಸಿಯೂಟ ಸೇವಿಸುವ ಸಂದರ್ಭದಲ್ಲಿ ನಡೆದಿದೆ.
ಅನ್ನ ಸಾಂಬಾರ್ ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.ಕೆಲವರಿಗೆ ವಾಂತಿಯಾಗಿದ್ದು, ಮತ್ತೆ ಕೆಲವರಿಗೆ ಹೊಟ್ಟೆ ನೋವು, ಇನ್ನು ಕೆಲವರಿಗೆ ತಲೆ ಸುತ್ತು ಬಂದಿದೆ ಎಂದು ಹೇಳಲಾಗಿದೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಶಾಸಕರ ಭೇಟಿ : ಸಮುದಾಯ ಆರೋಗ್ಯ ಕೇಂದ್ರ ದೋರನಹಳ್ಳಿಯಲ್ಲಿ ದಾಖಲಾದ ಮಕ್ಕಳ ಯೋಗಕ್ಷೇಮ ವಿಚಾರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ಯಾದಗಿರಿ ಶಾಸಕ ಚನ್ನ ರೆಡ್ಡಿ ಪಾಟೀಲ್ ತುನ್ನೂರ್ ಅವರು ದೇವರ ದಯದಿಂದ ಯಾವುದೇ ರೀತಿನ ಹೆಚ್ಚಿನ ಅನಾಹುತ ಆಗಿಲ್ಲ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಘಟನೆ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಅಧಿಕಾರಿಗಳ ಭೇಟಿ : ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ ಸುಶೀಲಾ ಬಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

About The Author